ETV Bharat / state

ಕೊರೊನಾ ಸೋಂಕು ಪತ್ತೆ: ಹಿರೇಬಾಗೇವಾಡಿಗೆ ಸಚಿವ ಸುರೇಶ್ ಅಂಗಡಿ ಭೇಟಿ, ಪರಿಶೀಲನೆ

ಗ್ರಾಮದಲ್ಲಿ ಸೋಂಕು ಪತ್ತೆಯಾಗಿರುವುದರಿಂದ ಗ್ರಾಮಸ್ಥರು ಲಾಕ್​ಡೌನ್ ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವ ಸುರೇಶ್​ ಅಂಗಡಿ ಹೇಳಿದರು.

central minister suresh angadi
ಸಚಿವ ಸುರೇಶ್ ಅಂಗಡಿ
author img

By

Published : Apr 15, 2020, 7:55 PM IST

ಬೆಳಗಾವಿ: ಕೋವಿಡ್-19 ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆ ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವ ಸುರೇಶ್​ ಅಂಗಡಿ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿರುವ ಹಿರೇಬಾಗೇವಾಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮದಲ್ಲಿ ಸೋಂಕು ಪತ್ತೆಯಾಗಿರುವುದರಿಂದ ಗ್ರಾಮಸ್ಥರು ಲಾಕ್​ಡೌನ್ ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು.

ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲ್ಪಟ್ಟಿರುವ ಗ್ರಾಮದಲ್ಲಿ ಸರ್ಕಾರದ ನಿರ್ದೇಶನದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೋಂಕು ಹರಡದಂತೆ ತಡೆಗಟ್ಟಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.