ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಹುಕ್ಕೇರಿ ತಾಲೂಕಿನಲ್ಲಿ ಇಂದು ಕೇಂದ್ರ ಅದ್ಯಯನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ಕೃಷ್ಣಾ, ದೂಧಗಂಗಾ, ವೇದಗಂಗಾ, ಹಿರಣ್ಯಕೇಸಿ ನದಿಗಳ ಪ್ರವಾಹದಿಂದ ಉಂಟಾದ ಹಾನಿಯ ಬಗ್ಗೆ ಬೆಳಗಾವಿ ಜಿಲ್ಲೆಯಲ್ಲಿ ಕೇಂದ್ರ ಅಧ್ಯಯನ ತಂಡ ಪರಿಶೀಲನೆ ನಡೆಸಲಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಡಕುಂದ್ರಿ, ಯರನಾಳ, ಹೊಸುರ ಮತ್ತು ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಅಧ್ಯಯನ ನಡೆಸಲಿದೆ.
ವರದಿ ಬಳಿಕ ಕೇಂದ್ರ ಸರ್ಕಾರ ಬೆಳೆ ಹಾನಿ ಮತ್ತು ನೆರೆ ಹಾನಿಯ ಪರಿಹಾರ ಘೋಷಣೆ ಮಾಡಲಿದೆ.