ETV Bharat / state

ಬೆಳಗಾವಿ: ಕೊರೊನಾ ಅಬ್ಬರದ ನಡುವೆ ನಿರಾತಂಕವಾಗಿ ನಡೆದ ಸಿಇಟಿ - CET Examination

ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಎರಡನೇ ದಿನವಾದ ಇಂದು ರಸಾಯನಶಾಸ್ತ್ರ ಹಾಗೂ ಭೌತಶಾಸ್ತ್ರ ಪರೀಕ್ಷೆಗಳು ನಿರಾತಂಕವಾಗಿ ನಡೆಯಿತು. ವಿದ್ಯಾರ್ಥಿಗಳು ಉತ್ಸಾಹದಿಂದಲೇ ಪರೀಕ್ಷೆ ಮುಗಿಸಿ ನಿರ್ಗಮಿಸಿದರು.

CET exams completed smoothly in the midst of Corona
ಕೊರೊನಾ ಆತಂಕದ ನಡುವೆಯೂ ಸುಗಮವಾಗಿ ನಡೆದ ಸಿಇಟಿ ಪರೀಕ್ಷೆ
author img

By

Published : Jul 31, 2020, 5:05 PM IST

ಬೆಳಗಾವಿ: ಕೊರೊನಾ ವೈರಸ್ ಆತಂಕದ ನಡುವೆಯೂ ನಿನ್ನೆ ಹಾಗೂ ಇಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ಸುಗಮವಾಗಿ ನಡೆದವು.

ಕೊರೊನಾ ಆತಂಕದ ನಡುವೆ ಸುಗಮವಾಗಿ ನಡೆದ 2ನೇ ದಿನದ ಸಿಇಟಿ ಪರೀಕ್ಷೆ

ಜಿಲ್ಲೆಯಲ್ಲಿನ ಒಟ್ಟು 29 ಕೇಂದ್ರಗಳಲ್ಲಿ 12,144 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಕೊರೊನಾ ವೈರಸ್ ತಡೆಗೆ ಶಿಕ್ಷಣ ಇಲಾಖೆಯಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿತ್ತು. ಪರೀಕ್ಷೆ ಆಗಮಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಸ್ಯಾನಿಟೈಸರ್ ಹಾಕಿ ಹಾಗೂ ಥರ್ಮಲ್‌ ಸ್ಕ್ಯಾನಿಂಗ್ ಮಾಡಲಾಯಿತು. ಇನ್ನು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿ ಪರೀಕ್ಷಾ ಕೇಂದ್ರದ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಂತೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು.

ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.