ETV Bharat / state

ಹುಕ್ಕೇರಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾಸ್ಕ ವಿತರಿಸಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ - ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾಸ್ಕ್ 5 ಸಾವಿರಕ್ಕೂ ಅಧಿಕ ಮಾಸ್ಕ್ ವಿತರಿಸಿದರು.

Chandrasekhar Swamiji
ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ
author img

By

Published : Jun 18, 2020, 7:17 PM IST

ಚಿಕ್ಕೋಡಿ: ಈ ಬಾರಿ ಹುಕ್ಕೇರಿ ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಹುಕ್ಕೇರಿ ಬಿಇಒ ಅವರಿಗೆ 5 ಸಾವಿರಕ್ಕೂ ಅಧಿಕ ಮಾಸ್ಕ್ ನೀಡಿದರು.

ಹುಕ್ಕೇರಿ ಮಠದಲ್ಲಿ ಹುಕ್ಕೇರಿ ಬಿಇಒ ಮೋಹನ್ ದಂಡಿನ್ ಅವರಿಗೆ ಮಾಸ್ಕ ವಿತರಣೆ ಮಾಡಿದ ಬಳಿಕ ಮಾತನಾಡಿದ ಅವರು, ಈ ಬಾರಿ ಹುಕ್ಕೇರಿ ತಾಲೂಕಿನಲ್ಲಿ 6,470 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದು, ಈ ಕೊರೊನಾ ಮಹಾಮಾರಿ ಬಂದಿದ್ದರಿಂದ ಮಕ್ಕಳ ಆರೋಗ್ಯ ದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲರಿಗೂ ಕೂಡ ಆರೋಗ್ಯ ತಪಾಸಣೆಯ ಜೊತೆಗೆ ಮಾಸ್ಕ್‌ಗಳನ್ನು ವಿತರಣೆ ಮಾಡುತ್ತಿದ್ದಾರೆ. ಅದರ ಜೊತೆಗೆ ಹುಕ್ಕೇರಿ ಶ್ರೀ ಮಠದಿಂದ ಮಾಸ್ಕಗಳನ್ನು ನೀಡಿದ್ದೇವೆ ಎಂದರು.

ಮಕ್ಕಳು ಆರೋಗ್ಯವನ್ನ ಕಾಯ್ದುಕೊಂಡು ಪರೀಕ್ಷೆ ಬರೆಯಬೇಕು ಇದರ ಜೊತೆಗೆ ಸರ್ಕಾರ ನಮ್ಮಗೆ ಸೌಲಭ್ಯ ಒದಗಿಸಿದೆ. ಅದನ್ನ ಸದ್ಬಳಕೆ ಮಾಡಿಕೊಂಡು ವ್ಯವಸ್ಥಿತವಾಗಿ ಉಪಯೋಗಿಸಿ ಧೈರ್ಯದಿಂದ ಪರೀಕ್ಷೆ ಬರೆಯಿರಿ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಮತ್ತೆ ರಾಜ್ಯದಲ್ಲಿ ಪ್ರಥಮ ಸ್ಥಾನ ಬರಲಿ ಎಂದು ಹೇಳಿದರು.

ಹುಕ್ಕೇರಿ ಬಿಇಒ ಮೋಹನ್ ದಂಡಿನ್ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಹುಕ್ಕೇರಿ ಶ್ರೀ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾಸ್ಕ ನೀಡಿದ್ದಾರೆ. ಪರೀಕ್ಷೆಗೆ ಬೇಕಾದ ಎಲ್ಲ ಸಹಾಯವನ್ನು ಶ್ರೀಮಠ ಮಾಡುತ್ತಿದೆ. ಬೇರೆ ಬೇರೆ ಗ್ರಾಮಗಳಿಂದ ಬರುವಂತ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕೂಡಾ ಮಾಡಿದ್ದಾರೆ ಇವರಿಗೆ ಇಲಾಖೆ ವತಿಯಿಂದ ಧನ್ಯವಾದ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.