ಬೆಳಗಾವಿ : ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರಿಗೆ ಸಿಎಂ ಬಸವರಾಜ್ ಬೊಮ್ಮಾಯಿಯವರೇ ಕ್ಲೀನ್‌ಚಿಟ್ ಕೊಟ್ಟಿರುವಾಗ ಈ ಪ್ರಕರಣದ ಪಾರದರ್ಶಕ ತನಿಖೆ ಹೇಗೆ ಸಾಧ್ಯ ಎಂದು ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಪ್ರಶ್ನಿಸಿದರು.
ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣ ತನಿಖೆ ಹಂತದಲ್ಲಿದೆ. ಮನೆ ಅಡ ಇಟ್ಟು ದುಡ್ಡು ಪಡೆದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಕೆ.ಎಸ್. ಈಶ್ವರಪ್ಪ ಶೇ.40ರಷ್ಟು ಕಮೀಷನ್ ಕೇಳಿರುವ ಬಗ್ಗೆ ಸಂತೋಷ ಆರೋಪಿಸಿದ್ದರು.
ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೆ ಎಸ್ ಈಶ್ವರಪ್ಪ ವಿರುದ್ಧ ಇನ್ನೊಂದು ಎಫ್ಐಆರ್ ದಾಖಲಿಸಬೇಕು. ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಈ ಪ್ರಕರಣದ ತನಿಖೆ ಸಿಬಿಐಗೆ ವಹಿಸಬೇಕು. ಆಪ್ ಮುಖಂಡ ಭಾಸ್ಕರ್ ರಾವ್ ಪ್ರಚಾರಕ್ಕಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಹೇಳುತ್ತಿದ್ದಾರೆ. ನಿಮ್ಮ ಬಗ್ಗೆ ಗೌರವ ಇದೆ, ಬೇಜವಾಬ್ದಾರಿ ಹೇಳಿಕೆ ಕೊಡಬೇಡಿ ಎಂದರು.
ಇದನ್ನೂ ಓದಿ: ಬೆಂಗಳೂರಿನತ್ತ ಈಶ್ವರಪ್ಪ ಪಯಣ: ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಕಣ್ಣೀರು