ಚಿಕ್ಕೋಡಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಲೋಕಸಭೆಯ ಒಟ್ಟು 8 ವಿಧಾನಸಭಾ ಮತಕ್ಷೇತ್ರದ ಮತದಾರರು ಮತದಾನ ಮಾಡದೆ ಚುನಾವಣೆ ಬಹಿಷ್ಕಾರ ಮಾಡುವಂತೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಹೇಳಿದರು.
ನಗರದದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಜಿಲ್ಲೆ ಆಗಬೇಕೆಂದು ಹಲವಾರು ವರ್ಷಗಳಿಂದ ಈ ಭಾಗದ ಜನರು ಹೋರಾಟ ಮಾಡುತ್ತಾ ಬಂದಿದ್ದಾರೆ. ಆದರೆ, ಇಲ್ಲಿನ ಜನಪ್ರತಿನಿಧಿಗಳು ಮಾತ್ರ ಸುಳ್ಳು ಭರವಸೆಗಳನ್ನು ನೀಡುತ್ತಾ ಚಿಕ್ಕೋಡಿ ಜಿಲ್ಲೆ ಮಾಡುವಲ್ಲಿ ಶ್ರಮಿಸುತ್ತೇವೆ ಅಂತಾ ಹೇಳುತ್ತಾ ಬರುತ್ತಿದ್ದಾರೆ. ಈ ರಾಜಕಾರಣಿಗಳು ಸುಳ್ಳು ಹೇಳೊದ್ರಲ್ಲಿ ಪಿಹೆಚ್ಡಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಕಡ್ಡಾಯವಾಗಿ ಮತದಾನ ಮಾಡುವಂತೆ ಹೇಳುತ್ತದೆ. ಆದರೆ, ಈ ಬಾರಿ ಚಿಕ್ಕೋಡಿ ಲೋಕಸಭೆಗೆ ಸೇರುವ ಎಲ್ಲ ವಿಧಾನಸಭಾ ಮತಕ್ಷೇತ್ರದ ಮತದಾರರ ಮನೆಗೆ ತೆರಳಿ ಮತದಾನ ಮಾಡಬೇಡಿ ಎಂದು ಹೇಳುತ್ತೇವೆ ಎಂದು ಹೇಳಿದರು.