ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ವೃದ್ಧೆಯೊಬ್ಬರು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದು, ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿದಾಗ ಕೊರೊನಾ ಇರುವುದು ದೃಢವಾಗಿದೆ.
ಬೆಳಗಾವಿಯಲ್ಲೇ ನಿಯಮಾವಳಿಗಳ ಪ್ರಕಾರ ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮಹಿಳೆಯಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆ ಆಕೆ ವಾಸಿಸುತ್ತಿದ್ದ ಏರಿಯಾವನ್ನು ಪೊಲೀಸರು ಹಾಗೂ ಪುರಸಭೆ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ.
ವೃದ್ಧೆ ವಾಸವಿದ್ದ ಏರಿಯಾದಲ್ಲಿ ಮುಂಜಾಗ್ರತಾ ಕ್ರಮವಾಗಿ ಹುಕ್ಕೇರಿ ಪುರಸಭೆ ವತಿಯಿಂದ ಪಟ್ಟಣದ ಅಂಗಡಿಗಳು ಹಾಗೂ ಏರಿಯಾವನ್ನು ಸ್ಯಾನಿಟೈಸ್ ಮಾಡಲಾಗಿದೆ.