ಚಿಕ್ಕೋಡಿ : ಯಾರ ಬಳಿ ಟಿವಿ, ಫ್ರಿಡ್ಜ್ ಹಾಗೂ ಬೈಕ್ ಇರುತ್ತದೆಯೋ ಅಂಥವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುವುದು ಎಂದ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ವಿರೋಧಿಸಿ ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ಜನ ಕತ್ತಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕೋಡಿ ಪಟ್ಟಣದ ಬಸವೇಶ್ವರ ಸರ್ಕಲ್ ಬಳಿ ನಡೆಸಿದ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ಸಚಿವ ಉಮೇಶ್ ಕತ್ತಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಉಮೇಶ್ ಕತ್ತಿ ಭಾವಚಿತ್ರದ ಮೇಲೆ ಗೀಟು ಹೊಡೆದು, ಸರ್ಕಾರ ಮತ್ತು ಸಚಿವರ ವಿರುದ್ಧ ಧಿಕ್ಕಾರ ಕೂಗಿದರು.
ಈಗಷ್ಟೇ ಸಚಿವ ಸ್ಥಾನ ಸಿಗುತ್ತಿದ್ದಂತೆ ಈ ರೀತಿ ಜನವಿರೋಧಿ ನಿರ್ಧಾರಕ್ಕೆ ಮುಂದಾಗಿರುವ ಉಮೇಶ ಕತ್ತಿಗೆ ಸ್ವಂತ ಜಿಲ್ಲೆಯಲ್ಲಿಯೇ ಪ್ರತಿಭಟನೆ ಬಿಸಿ ತಟ್ಟಿದೆ. ಮುಂದೆ ಇದು ರಾಜ್ಯಾದ್ಯಂತ ಹಬ್ಬಿದ್ರೂ ಕೂಡ ಅಚ್ಚರಿ ಪಡುವಂತಿಲ್ಲ.