ಚಿಕ್ಕೋಡಿ: ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಹಾಗೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆ ಹಿನ್ನೆಲೆ ಕೃಷ್ಣಾ ನದಿ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದ್ದು, ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಭಾವನ ಸೌದತ್ತಿ ಗ್ರಾಮದ ನದಿ ತೀರದ ಜನರು ಜಾನುವಾರಗಳ ಸಮೇತ ಸುರಕ್ಷಿತ ಸ್ಥಳಗಳಿಗೆ ಬರುತ್ತಿದ್ದಾರೆ. ಕೃಷ್ಣಾ ನದಿ ನೀರಿನಲ್ಲಿ ಏರಿಕೆ ಹಿನ್ನೆಲೆಯಲ್ಲಿ ಭಾವನ ಸೌದತ್ತಿ ಹಾಗೂ ಹಳೆ ದಿಗ್ಗೆವಾಡಿ ಗ್ರಾಮದ ಸಂಚಾರ ಬಂದ್ ಆಗಿದೆ.