ಚಿಕ್ಕೋಡಿ(ಬೆಳಗಾವಿ): ಲಾಕ್‍ಡೌನ್ ಹಿನ್ನೆಲೆ ಮನೆಯಿಂದ ಹೊರಗೆ ಬರಬೇಡಿ ಎಂದು ಪೊಲೀಸರು ಮನವಿ ಮಾಡಿಕೊಂಡರೂ ಕೇಳದೆ ಅನಾವಶ್ಯಕವಾಗಿ ಲಾಕ್‍ಡೌನ್ ಉಲ್ಲಂಘಿಸಿದ ಹಿನ್ನೆಲೆ ಚಿಕ್ಕೋಡಿ ಪಟ್ಟಣದಲ್ಲಿ ಎರಡು ದಿನಗಳಲ್ಲಿ 70ಕ್ಕೂ ಹೆಚ್ಚು ದ್ವಿಚಕ್ರ ವಾಹಗಳನ್ನು ಸೀಜ್ ಮಾಡಿದ್ದಾರೆ.
ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ತೊಲಗಿಸುವ ನಿಟ್ಟಿನಲ್ಲಿ ಲಾಕ್‍ಡೌನ್ ಹೇರಲಾಗಿದೆ. ಸಾರ್ವಜನಿಕರು ಮನೆಯಲ್ಲಿಯೇ ಇರುವ ಮೂಲಕ ಲಾಕ್‍ಡೌನ್ ಪಾಲಿಸಿ ಎಂದು ಪೊಲೀಸರು ಮನವಿ ಮಾಡಿದರೂ ಕೇಳದ ಹಿನ್ನೆಲೆ ಚಿಕ್ಕೋಡಿ ಡಿವೈಎಸ್ಪಿ ಮನೋಜ್ ನಾಯಿಕ್ ನೇತೃತ್ವದಲ್ಲಿ ಸಂಚಾರಿ ಪೊಲೀಸ್ ಸಿಬ್ಬಂದಿ ಪಟ್ಟಣದಲ್ಲಿ ಓಡಾಡುತ್ತಿದ್ದ ಬೈಕ್ಗಳನ್ನು ಸೀಜ್ ಮಾಡಿದ್ದಾರೆ.