ಚಿಕ್ಕೋಡಿ: ಚಿಕ್ಕೋಡಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕೊರೊನಾ ಲಗ್ಗೆಯಿಟ್ಟಿದ್ದು, ಆಸ್ಪತ್ರೆ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆ ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢವಾಗಿದ್ದು, ಅವರು ಆಸ್ಪತ್ರೆ ವಿವಿಧ ವಿಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಡೀ ಆಸ್ಪತ್ರೆಯನ್ನೇ ಸೀಲ್ಡೌನ್ ಮಾಡಲಾಗಿದೆ.