ಚಿಕ್ಕೋಡಿ: ಶಿವಸೇನೆ ಪುಂಡಾಟಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪುಂಡಾಟ ನಡೆಸುತ್ತಿದ್ದ ಶಿವಸೇನೆ ಕಾರ್ಯಕರ್ತರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದ ಹೊರ ವಲಯದಲ್ಲಿ ಈ ಘಟನೆ ನಡೆದಿದೆ. ಪುಂಡ ಮರಾಠಿಗರು ರಸ್ತೆ ತಡೆದು ಕನ್ನಡಿಗರ ಮೇಲೆ ಹಲ್ಲೆ ನಡೆಸಲು ಮುಂದಾದರು. ಇದರಿಂದ ಕೋಪಗೊಂಡ ಕನ್ನಡಿಗರು ಪುಂಡರ ಮೇಲೆ ಹಲ್ಲೆ ಮಾಡಿದ್ದಾರೆ. ದೊಣ್ಣೆಯಿಂದ ಎರಡು ಗುಂಪುಗಳ ನಡುವೆ ಹೊಡೆದಾಟ ಸಂಭವಿಸಿದೆ. ಶಿವಾಜಿ ಮೂರ್ತಿ ಪ್ರತಿಷ್ಟಾಪನೆ ವಿಚಾರವಾಗಿ ಬೆಳಗ್ಗೆಯಿಂದಲು ಶಿವಸೇನೆ ಕಾರ್ಯಕರ್ತರು ಗಲಾಟೆ ನಡೆಸುತ್ತಿದ್ದರು.