ಚಿಕ್ಕೋಡಿ (ಬೆಳಗಾವಿ) : ಸರ್ಕಾರಿ ಕನ್ನಡ ಕಿರಿಯ ಪ್ರಾರ್ಥಮಿಕ ಶಾಲೆ ಆವರಣದಲ್ಲಿರುವ ಸರಸ್ವತಿ ಮೂರ್ತಿಯನ್ನು ಧ್ವಂಸಗೊಳಿಸಲಾಗಿದೆ. ಯಾರೋ ಕಿಡಿಗೇಡಿಗಳು ಮೂರ್ತಿಗೆ ಹಾನಿ ಮಾಡಿ ಪರಾರಿ ಆಗಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾಲೂಕಿನ ಚಿಂಚನಿ ಗ್ರಾಮದ ಶಾಲಾ ಆವರಣದಲ್ಲಿರುವ ವಿದ್ಯಾದೇವತೆ ಸರಸ್ವತಿ ದೇವಿ ಮೂರ್ತಿಯನ್ನು ಧ್ವಂಸಗೊಳಿಸಲಾಗಿದೆ.

ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಇತ್ತ ಪ್ರಕರಣ ದಾಖಲಿಸಿಕೊಂಡ ಚಿಕ್ಕೋಡಿ ಪೊಲೀಸರು, ಶಾಲೆಗೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.
ಇದನ್ನೂ ಓದಿ: ಅಥಣಿ ತಹಶೀಲ್ದಾರ್ಗೆ ಮಹಿಳೆಯರಿಂದ ದಿಗ್ಬಂಧನ
ಯಾರು ಇಲ್ಲದ ವೇಳೆ ಕಿಡಿಗೇಡಿಗಳು ಸರಸ್ವತಿ ದೇವಿ ಮೂರ್ತಿಯ ಕೈ, ಗಿಟಾರ್ ಸೇರಿದಂತೆ ದೇವಿಯ ಮೂರ್ತಿಗೆ ಹಾನಿ ಮಾಡಿದ್ದಾರೆ. ಈ ಘಟನೆ ಶಾಲಾ ಅವಧಿ ಮುಗಿದ್ಮೇಲೆ ನಡೆದಿದ್ದು ಎನ್ನಲಾಗಿದೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.