ಚಿಕ್ಕೋಡಿ(ಬೆಳಗಾವಿ): ಚಾಲಕನ ನಿಯಂತ್ರಣ ತಪ್ಪಿ ಬೈಕ್ ಹಾಗೂ ಮೂರು ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಮಗ ಮತ್ತು ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಕ್ಕೇರಿಯ ರಕ್ಷಿ ಗ್ರಾಮದಲ್ಲಿ ನಡೆದಿದೆ.
ಬೈಲಹೊಂಗಲ ಪಟ್ಟಣದ ನಿವಾಸಿ ಭಾರತಿ ಪೂಜೇರಿ (28), ವೇದಾಂತ ಪೂಜೇರಿ (6) ಮೃತರು. ಭಾರತಿ ಅವರ ಪತಿ ಅನಿಲ ಪೂಜೇರಿ ಹಾಗೂ ಗೋಕಾಕ್ ತಾಲೂಕಿನ ಕಿರಣ ಸಾಲಿಮಠ (28) ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ನೀರಿನ ಹೊಂಡದಲ್ಲಿ ಮುಳುಗಿ ಆರು ಮಕ್ಕಳ ದಾರುಣ ಸಾವು
ಮೃತರು ಬೈಕ್ ಮೇಲೆ ಸಂಚರಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಈ ವೇಳೆ ಕೆಳಗಡೆ ಬಿದ್ದ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹುಕ್ಕೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.