ಚಿಕ್ಕೋಡಿ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಾಯಬಾಗ ತಾಲೂಕಿನ ಬಾವನಸೌದತ್ತಿ ಗ್ರಾಮದ ಸುಗಂಧ ದೇವಿ ದೇವಸ್ಥಾನ ಜಲಾವೃತವಾಗಿದೆ.
ಕೃಷ್ಣಾ ನದಿ ಏಳು ಅಡಿಗಿಂತ ಹೆಚ್ಚು ಏರಿಕೆಯಾಗಿದ್ದು, ಇದರಿಂದ ನದಿ ತೀರದ ಜನರು ತಮ್ಮ ಮೂಲ ಸ್ಥಳಗಳಿಂದ ದನಕರಗಳು ಹಾಗೂ ಸಾಮಗ್ರಿಗಳನ್ನು ತೆಗೆದುಕೊಂಡು ಗಂಜಿ ಕೇಂದ್ರಗಳಿಗೆ ತೆರಳುತ್ತಿದ್ದಾರೆ.
ನದಿ ಪಾತ್ರದಲ್ಲಿ ಎನ್‌ಡಿಆರ್‌ಎಫ್ ತಂಡಗಳ ನಿಯೋಜನೆ ಮಾಡಲಾಗಿದ್ದು, ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುತ್ತಿರುವ ಕೆಲಸ ತಾಲೂಕು ಆಡಳಿತ ಮಾಡುತ್ತಿದೆ.