ಚಿಕ್ಕೋಡಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆಯಂತೆ ರಾಜ್ಯಾದ್ಯಂತ ಸಿಎಎ (ಪೌರತ್ವ ತಿದ್ದುಪಡಿ ಮಸೂದೆ) ಬಗ್ಗೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಸೇರಿ ಕೆಲ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ ಅಂತಾ ವಿಧಾನಸಭಾ ಮುಖ್ಯಸಚೇತಕ ಮಾಂತೇಶ ಕವಟಗಿಮಠ ಆರೋಪಿಸಿದರು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಬಿಜೆಪಿ ಹಾಗೂ ಆರ್ಎಸ್ಎಸ್ ವತಿಯಿಂದ ಮನೆ ಮನೆಗೆ ಭೇಟಿ ನೀಡುವ ಮೂಲಕ ಜನಜಾಗೃತಿ ಮೂಡಿಸಲಾಯಿತು. ನೂತನ ಪೌರತ್ವ ಮಸೂದೆ ಜಾರಿಗೊಳಿಸಲಾಗಿದೆ. ಕರಪತ್ರದಲ್ಲಿ ಸಂಪೂರ್ಣ ವಿವರವನ್ನು ಜನರಿಗೆ ನೀಡಲಾಗಿದೆ. ಎಲ್ಲ ಧರ್ಮ, ಜಾತಿಯವರು ಒಂದೇ ತಾಯಿಯ ಮಕ್ಕಳಂತಿದ್ದೇವೆ ಎಂದರು.