ಬೆಳಗಾವಿ : ಅನೇಕ ಕಾನೂನು ತೊಡಕುಗಳನ್ನು ಪರಿಹರಿಸಿ ಲಂಬಾಣಿ ತಾಂಡಾ, ಗೊಲ್ಲರಹಟ್ಟಿ, ಕುರುಬರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲಾಗಿದೆ. ಅದೇ ರೀತಿ ಕಾಡಂಚಿನಲ್ಲಿ ಹಾಗೂ ಖಾಸಗಿ ಜಾಗದಲ್ಲಿ ಇರುವ ಜನರಿಗೂ ಹಕ್ಕುಪತ್ರವನ್ನು ನೀಡಲು ಸರ್ಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇದನ್ನೂ ಓದಿ : ರಾಜ್ಯದ ಮತ್ತು ಕನ್ನಡಿಗರ ಹಿತ ಕಾಪಾಡುವಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ವಿಫಲ: ಸಿದ್ದರಾಮಯ್ಯ
ವಿವಿಧ ತಾಂಡಾಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ-ಸಿಎಂ: ರಾಮದುರ್ಗ ತಾಲ್ಲೂಕಿನ ಬಟಕುರ್ಕಿಯಲ್ಲಿ ಬುಧವಾರ ನಡೆದ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಹಕ್ಕುಪತ್ರ ವಿತರಣಾ ಸಮಾವೇಶ, ಅನುಷ್ಠಾನ ಹಾಗೂ ಅರಿವು ಕಾರ್ಯಕ್ರಮದಲ್ಲಿ ವಿವಿಧ ತಾಂಡಾಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿ, ಪ್ರಧಾನಮಂತ್ರಿಗಳು ಇತ್ತೀಚಿಗೆ ಕಲಬುರಗಿಯಲ್ಲಿ 50 ಸಾವಿರಕ್ಕೂ ಅಧಿಕ ಜನರಿಗೆ ಹಕ್ಕುಪತ್ರ ನೀಡಿರುತ್ತಾರೆ. ಮುಂದಿನ ದಿನಗಳಲ್ಲಿ ದಾವಣಗೆರೆಯಲ್ಲಿ ಇನ್ನೂ 50 ಸಾವಿರ ಜನರಿಗೆ ಹಕ್ಕುಪತ್ರ ವಿತರಿಸಲಿದ್ದಾರೆ ಎಂದರು.
ಇದನ್ನೂ ಓದಿ : 2023 ಕರ್ನಾಟಕ ವಿಧಾನಸಭಾ ಚುನಾವಣೆ: ಕೆಆರ್ಎಸ್ ಪಕ್ಷದಿಂದ ಪ್ರಣಾಳಿಕೆ ಬಿಡುಗಡೆ
ಸಾರ್ವಜನಿಕರಿಗೆ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜನೆ : ಸಮಾಜದಲ್ಲಿ ಯಾವುದೇ ನಿರ್ಣಯ ತೆಗೆದುಕೊಳ್ಳುವಾಗ ಏನೇ ಗೊಂದಲ ಎದುರಾದರೂ ಸಮಾಜದ ಕಟ್ಟಕಡೆಯ ಜನರ ಕಣ್ಣೀರು ನೋಡಿ ದಿಟ್ಟ ನಿರ್ಧಾರ ತೆಗೆದುಕೊಳ್ಳಬೇಕು. ಅಂತಹ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸರಕಾರಿ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವುದರ ಜತೆಗೆ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ : ರೈತರು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.. ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ಎಲ್ಲ ಎಸ್ಕಾಂಗಳ ನಿರ್ಧಾರ
ಮಲಪ್ರಭೆ ನದಿತೀರದಲ್ಲಿ ಪ್ರವಾಹಹಾನಿ ತಪ್ಪಿಸಲು 125 ಕೋಟಿ ರೂಪಾಯಿ ವೆಚ್ಚದಲ್ಲಿ ರಕ್ಷಣಾ ಗೋಡೆ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಬೆಳೆಹಾನಿ ಪರಿಹಾರವಾಗಿ ಕೇಂದ್ರ ಸರ್ಕಾರ ನೀಡುವ ಪರಿಹಾರಧನದ ಎರಡು ಪಟ್ಟು ಪರಿಹಾರವನ್ನು ರಾಜ್ಯ ಸರ್ಕಾರ ನೀಡಿರುವುದು ದೇಶದಲ್ಲೇ ಮೊದಲು. ಇದು ನಮ್ಮ ಸರ್ಕಾರದ ಬದ್ಧತೆಯಾಗಿದೆ ಎಂದು ಹೇಳಿದರು.
ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಿದ ಶಾಸಕ: ಇನ್ನೊಂದೆಡೆ ಆಶ್ರಯ ಯೋಜನೆಯಡಿ ಸುಮಾರು 131 ಫಲಾನುಭವಿಗಳಿಗೆ (ಮಾರ್ಚ್ 1)ರಂದು ಶಾಸಕ ನಾಗನಗೌಡ ಕಂದಕೂರ ಮತ್ತು ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಹಕ್ಕುಪತ್ರಗಳನ್ನು ಹಂಚಿಕೆ ಮಾಡಿದ್ದರು. ಗುರುಮಠಕಲ್ ಪುರಸಭೆ ವ್ಯಾಪ್ತಿಯ ಆಶ್ರಯ ಯೋಜನೆ ಅಡಿ ಸರ್ವೆ ನಂ.19/1 ರಲ್ಲಿ 33 ಜನ, ಸರ್ವೆ.ನಂ 20ರಲ್ಲಿ 30 ಜನ, 25ರಲ್ಲಿ 131 ಜನರನ್ನು ಆಯ್ಕೆಮಾಡಿ ಈ ಹಿಂದೆ ನಿವೇಶನಗಳ ಹಕ್ಕುಪತ್ರಗಳನ್ನು ನೀಡಲಾಗಿತ್ತು.
ಆದರೆ, ಹಕ್ಕು ಪತ್ರ ನೀಡಿದ್ದರೂ ನಿವೇಶನಗಳನ್ನು ಹಂಚಿಕೆ ಮಾಡದೇ ನನೆಗುದಿಗೆ ಬಿದ್ದು 30 ವರ್ಷಗಳು ಕಳೆದಿದ್ದವು. ಇದೀಗಾ ನನೆಗುದಿಗೆ ಬಿದ್ದ ಸಮಸ್ಯೆಯನ್ನು ಶಾಸಕ ನಾಗನಗೌಡ ಕಂದಕೂರ ಮತ್ತು ಮುಖ್ಯಾಧಿಕಾರಿ ಭಾರತಿ ದಂಡೋತಿ ಅವರ ಸಮಕ್ಷಮದಲ್ಲಿ ಪರಿಹರಿಸಲಾಯಿತು.
ಇದನ್ನೂ ಓದಿ : ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಬಸವಣ್ಣ ಪ್ರತಿಮೆ ಸ್ಥಾಪನೆ: ಸಿಎಂ ಭರವಸೆ