ETV Bharat / state

ರೈತರ ಸಮಸ್ಯೆ ಬಗ್ಗೆ ಮುಖಂಡರ ಜೊತೆ ಸಿಎಂ ಚರ್ಚೆ : ಸಚಿವ ಆರಗ ಜ್ಞಾನೇಂದ್ರ

ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತ ಮುಖಂಡರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

cm-bommai-will-discuss-with-farmers-about-problem-says-home-minister-araga-jnanendra
ರೈತರ ಸಮಸ್ಯೆ ಬಗ್ಗೆ ಮುಖಂಡರ ಜೊತೆ ಸಿಎಂ ಚರ್ಚೆ
author img

By

Published : Dec 19, 2022, 9:18 PM IST

Updated : Dec 19, 2022, 9:35 PM IST

ರೈತರ ಸಮಸ್ಯೆ ಬಗ್ಗೆ ಮುಖಂಡರ ಜೊತೆ ಸಿಎಂ ಚರ್ಚೆ : ಸಚಿವ ಆರಗ ಜ್ಞಾನೇಂದ್ರ

ಬೆಳಗಾವಿ : ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತ ಮುಖಂಡರ ಜೊತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಗರದ ಬಸ್ತವಾಡ ಗ್ರಾಮದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಸ್ವೀಕರಿಸಿದರು.

ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಮ್ಮದು ರೈತರ ಪರ ಸರ್ಕಾರ. ರೈತರ ಸಮಸ್ಯೆ ಆಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಯ ನೀಡಿದ್ದಾರೆ. ರೈತರ ವಿವಿಧ ಬೇಡಿಕೆಗಳನ್ನು ಪೂರೈಸಲು ರೈತರ ನಿಯೋಗ ಸಿಎಂ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಜ.4 ಅಥವಾ 5ರಂದು ರೈತರ ನಿಯೋಗ ಸಿಎಂ ಅವರನ್ನು ಭೇಟಿ ಮಾಡಲಿದೆ ಎಂದು ಹೇಳಿದರು. ಬಳಿಕ ರೈತರು ಪ್ರತಿಭಟನೆ ಮೊಟಕುಗೊಳಿಸಿದರು.

ಪ್ರತಿಭಟನೆ ಕಾವು ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಸಚಿವರು: ಇನ್ನು ಪ್ರತಿಭಟನಾನಿರತ ರೈತರು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಪ್ರತಿಭಟನೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕಾಗಮಿಸಿ ರೈತರ ಅಹವಾಲು ಸ್ವೀಕರಿಸಿದರು.

ಎಂಇಎಸ್ ವಿಚಾರದಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು : ಬೆಳಗಾವಿಯಲ್ಲಿ ಏನಾದರೂ ಕಾನೂನು ಸುವ್ಯವಸ್ಥೆ ಧಕ್ಕೆಯಾದರೆ ಎಂಇಎಸ್ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಉಭಯ ರಾಜ್ಯದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ನಡೆದಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಶಾಂತಿ ಕಾಪಾಡಲು ಮಹಾರಾಷ್ಟ್ರ ಪೊಲೀಸರು 200ಕ್ಕೂ ಜನ ಎಂಇಎಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಗಡಿ ವಿಚಾರದಲ್ಲಿ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉಭಯ ಮುಖ್ಯಮಂತ್ರಿಗಳ ಸಭೆ ನಡೆದಿದೆ. ನಮ್ಮ ಪೊಲೀಸರು ಗಡಿಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಳಗಾವಿ ನಗರದಲ್ಲೂ ಯಾವುದೇ ಮುಖ್ಯ ರಸ್ತೆಯನ್ನು ಎಂಇಎಸ್ ತಡೆಗಟ್ಟಿಲ್ಲ ಎಂದು ಗೃಹ ಸಚಿವರು ಹೇಳಿದರು.

ಇದನ್ನೂ ಓದಿ : ಬೆಳಗಾವಿ ಗಡಿ ವಿವಾದ: ಸಾಂವಿಧಾನಿಕ ಮಾರ್ಗದ ಮೂಲಕವೇ ಪರಿಹಾರ- ಅಮಿತ್ ಶಾ

Last Updated : Dec 19, 2022, 9:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.