ಬೆಳಗಾವಿ: ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ಬಗ್ಗೆ ತೀರ್ಮಾನ ಮಾಡಿದ್ದೇವೆ. ಈ ಅಧಿವೇಶನದಲ್ಲಿ ಸಾಧ್ಯವಾದ್ರೆ ಗೋಹತ್ಯೆ ಮಸೂದೆ ಜಾರಿಗೆ ತರಬೇಕು ಅಂತ ಚರ್ಚೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ನಮ್ಮ ಕುಟುಂಬಕ್ಕೆ ಯಾವುದೋ ಶಾಪ ಇದೆ: ಹೆಚ್ಡಿಕೆ ಹೀಗೆ ಹೇಳಿದ್ದೇಕೆ..?
ಕಾಂಗ್ರೆಸ್ನಷ್ಟು ಬಿಜೆಪಿಯವರು ದ್ರೋಹ ಮಾಡಿರಲಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿಯವರು ಸತ್ಯ ಸಂಗತಿಗಳನ್ನು ಹೇಳುತ್ತಿದ್ದಾರೆ ಎಂದರು.
ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕಾರಣಿ ಅತ್ಯಂತ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ತಿಳಿಸಿದರು.
ಕಾರ್ಯಕಾರಿಣಿ ಸಭೆಯಲ್ಲಿ ಗೋಹತ್ಯೆ ನಿಷೇಧದ ಬಗ್ಗೆ ಮತ್ತು ಲವ್ ಜಿಹಾದ್ ಬಗ್ಗೆ ತೀರ್ಮಾನ ಮಾಡಿದ್ದೇವೆ. ಈ ಅಧಿವೇಶನದಲ್ಲಿ ಸಾಧ್ಯವಾದರೆ ಗೋಹತ್ಯೆ ಮಸೂದೆ ಜಾರಿಗೆ ತರಬೇಕು ಅಂತಾ ಚರ್ಚೆಯಾಗಿದೆ. ಮಸ್ಕಿ, ಬಸವಕಲ್ಯಾಣ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.