ETV Bharat / state

ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚನೆಗೆ ಸಿಎಂ ಸೂಚನೆ

Special Court to solve murder cases: ಪ್ರಕರಣ ಸಂಬಂಧ ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ರಚಿಸುವಂತೆ ಎರಡೂ ಪ್ರಕರಣಗಳ ಮೃತರ ಸಂಬಂಧಿಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

CM Siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ
author img

By ETV Bharat Karnataka Team

Published : Dec 6, 2023, 2:14 PM IST

ಬೆಳಗಾವಿ: ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಲು ಸಿಎಂ ಸಿದ್ದರಾಮಯ್ಯ ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಈ ಎರಡೂ ಪ್ರಕರಣಗಳ ಚಾರ್ಜ್ ಶೀಟ್ ಸಲ್ಲಿಸಿ ವರ್ಷಗಳು ಕಳೆದರೂ ನ್ಯಾಯಾಲಯಗಳಲ್ಲಿ ನಿಧಾನಗತಿಯಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಮೃತರ ಸಂಬಂಧಿಕರು ತಮ್ಮ ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಪ್ರಕರಣ ಸಂಬಂಧ ತ್ವರಿತ ಗತಿಯಲ್ಲಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ರಚಿಸುವಂತೆ ಸರ್ಕಾರವನ್ನು ಕೋರಿದ್ದರು.

ಬೆಳಗಾವಿ ಸುವರ್ಣಸೌಧದಲ್ಲಿ ಇಂದು ಒಳಾಡಳಿತ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ನಡೆಸಿ, ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ಅವರು ಸೆಪ್ಟೆಂಬರ್ 5, 2017 ರಂದು ಹತ್ಯೆಗೀಡಾಗಿದ್ದರು. ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ 18 ಆರೋಪಿಗಳು ಬಂಧನಕ್ಕೊಳಗಾಗಿದ್ದು, 1200 ಪುರಾವೆ ಹಾಗೂ 500 ಕ್ಕೂ ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್‌ ಶೀಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಜುಲೈ, 2022 ರಿಂದ ಪ್ರಾರಂಭಗೊಂಡಿತ್ತು. ನ್ಯಾಯಾಲಯದ ದಿನನಿತ್ಯದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಆದ್ದರಿಂದ, ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಮೃತರ ಸಹೋದರಿ ಕವಿತಾ ಲಂಕೇಶ್ ಸರ್ಕಾರವನ್ನು ಕೋರಿದ್ದರು.

ಇನ್ನು ಹಿರಿಯ ಸಾಹಿತಿ ಡಾ. ಎಂ.ಎಂ. ಕಲಬುರ್ಗಿರನ್ನು ಆಗಸ್ಟ್​ 31, 2015 ರಂದು ಧಾರವಾಡದ ಅವರ ಸ್ವಗೃಹದಲ್ಲಿ ಹತ್ಯೆಯಾಗಿ ಏಳು ವರ್ಷಗಳು ಪೂರ್ಣಗೊಂಡಿವೆ. ಪ್ರಕರಣದ ಸಂಬಂಧ 2018-19ರಲ್ಲಿ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಕೆಯಾಗಿದ್ದು, ಮೃತರ ಕುಟುಂಬದವರ ವಿಚಾರಣೆಗಳು ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರೆದಿವೆ. ಈಗಾಗಲೇ ಸಾಕಷ್ಟು ಸಮಯ ಆಗಿರುವುದರಿಂದ ವಿಶೇಷ ನ್ಯಾಯಾಲಯ ರಚಿಸುವಂತೆ ಮೃತರ ಪತ್ನಿ ಉಮಾದೇವಿ ಕಲಬುರ್ಗಿ ಅವರು ಕೋರಿದ್ದರು.

ಇದೀಗ ಪತ್ರಕರ್ತೆ ಗೌರಿ ಲಂಕೇಶ್ ಮತ್ತು ಹಿರಿಯ ಸಾಹಿತಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ರಚಿಸಲು ಮತ್ತು ಪೂರ್ಣಾವಧಿ ನ್ಯಾಯಾಧೀಶರ್ನು ನೇಮಿಸಲು ಸಿಎಂ ಸೂಚಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ಬರೆದು ಸೂಚಿಸಿದ್ದಾರೆ.

ಇದನ್ನೂ ಓದಿ: 'ನಾನು ಸಿಎಂ ಸಿದ್ದರಾಮಯ್ಯ ವಕ್ತಾರನಲ್ಲ': ಬಿ.ಕೆ. ಹರಿಪ್ರಸಾದ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.