ETV Bharat / state

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​​ ಮನವಿಗೆ ಸಿಎಂ ಸ್ಪಂದನೆ: ಮನೆ ಕಳೆದುಕೊಂಡವರಿಗೆ ಪರಿಹಾರ

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಟ್ಟು 9 ಮನೆಗಳಿಗೆ ತಲಾ 1 ಲಕ್ಷ ರೂ.ಗಳಂತೆ 9 ಲಕ್ಷ ರೂ. ಮಂಜೂರು ಮಾಡಿದ್ದಾರೆ.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
author img

By

Published : May 28, 2020, 3:47 PM IST

ಬೆಳಗಾವಿ: ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬೆಂಕಿ ಅವಘಡದಿಂದ ಮನೆಗಳು ಸುಟ್ಟು ಆರ್ಥಿಕ ನಷ್ಟಕ್ಕೀಡಾಗಿದ್ದವರಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ಧನಸಹಾಯ ಮಂಜೂರಾಗಿದೆ.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಟ್ಟು 9 ಮನೆಗಳಿಗೆ ತಲಾ 1 ಲಕ್ಷ ರೂ.ಗಳಂತೆ 9 ಲಕ್ಷ ರೂ. ಮಂಜೂರು ಮಾಡಿದ್ದಾರೆ.

ಹಲಗಾ, ಹಿರೇಬಾಗೇವಾಡಿ ಹಾಗೂ ಬಡಸ್ ಕೆ.ಹೆಚ್. ಗ್ರಾಮಗಳಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿತ್ತು. ಅನೇಕ ಮನೆಗಳು ಬೆಂಕಿಗೆ ಆಹುತಿಯಾಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತರ ಕಷ್ಟಗಳಿಗೆ ಸ್ಪಂದಿಸಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹಾನಿಗೀಡಾದ ಮನೆಗಳಿಗೆ ಪರಿಹಾರ ನೀಡುವಂತೆ ಲಕ್ಷ್ಮಿ ಹೆಬ್ಬಾಳ್ಕರ್​ ಮನವಿ ಸಲ್ಲಿಸಿದ್ದರು.

ಮುಖ್ಯಮಂತ್ರಿಗಳು 9 ಸಂತ್ರಸ್ತರಿಗೆ ತಲಾ ಒಂದು ಲಕ್ಷ ರೂ. ಪರಿಹಾರದಂತೆ ಒಟ್ಟು 9 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲು ಸೂಚಿಸಿದ್ದಾರೆ. ಆದಷ್ಟು ಬೇಗ ಸಂತ್ರಸ್ತರಿಗೆ ಪರಿಹಾರದ ಚೆಕ್​ಗಳನ್ನು ಹಸ್ತಾಂತರಿಸುತ್ತೇನೆ ಎಂದು ಹೆಬ್ಬಾಳ್ಕರ್​​ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.