ETV Bharat / state

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗೆ ಹೊಸ ರೂಪ; ನೂತನ ಹೆಲ್ತ್ ಕಾರ್ಡ್‌ಗೆ ಸಿಎಂ ಚಾಲನೆ

ಆಯುಷ್ಮಾನ್‌ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ, ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್​ಗಳನ್ನಾಗಿ ನವೀಕರಿಸಲಾಗಿದೆ. ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆ ಸಿಗಬೇಕೆನ್ನುವುದು ರಾಜ್ಯ ಸರ್ಕಾರದ ಆದ್ಯತೆಗಳಲ್ಲಿ ಒಂದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

distribution of health cards
ಫಲಾನುಭವಿಗಳಿಗೆ ಹೆಲ್ತ್ ಕಾರ್ಡ್ ವಿತರಿಸಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
author img

By ETV Bharat Karnataka Team

Published : Dec 6, 2023, 9:34 PM IST

ಬೆಳಗಾವಿ: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್​ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಿಡುಗಡೆಗೊಳಿಸಿದರು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್​ಗಳನ್ನು ಆಯುಷ್ಮಾನ್‌ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ, ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಎಂದು ನವೀಕರಿಸಲಾಗಿದೆ.

ಸುವರ್ಣಸೌಧದಲ್ಲಿ ನಡೆದ ಹೆಲ್ತ್​ ಕಾರ್ಡ್​ ಬಿಡುಗಡೆ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್​ನಲ್ಲಿ ಕೆಲ ಬದಲಾವಣೆ ತರಲಾಗಿದೆ. ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್​ಗಳನ್ನು ವಿತರಿಸುವ ಗುರಿಯನ್ನು ಆರೋಗ್ಯ ಇಲಾಖೆ ಹಾಕಿಕೊಂಡಿದ್ದು, ನೂತನ ಕಾರ್ಡ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.‌ ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆ ಒದಗಿಸಬೇಕೆನ್ನುವುದು ರಾಜ್ಯ ಸರ್ಕಾರದ ಆದ್ಯತೆಗಳಲ್ಲಿ ಒಂದು ಎಂದು ತಿಳಿಸಿದರು.

ಆರೋಗ್ಯ ಯೋಜನೆ ಹೈಲೆಟ್ಸ್: ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಷನಲ್ ಪೋರ್ಟಲ್‌ಗೆ ನೂತನ ಹೆಲ್ತ್ ಕಾರ್ಡ್‌ಗಳನ್ನು ಸಂಯೋಜನೆಗೊಳಿಸಲಾಗಿದೆ. ರಾಜ್ಯದ ಬಿಪಿಎಲ್ ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್​ನೀಡಿ ಚಿಕಿತ್ಸೆ ಪಡೆಯಬಹುದಾಗಿದೆ.

ರಾಜ್ಯದ ಒಟ್ಟು5.09 ಕೋಟಿ ಫಲಾನುಭವಿಗಳಿಗೆ ಮುಂದಿನ 6 ತಿಂಗಳ ಒಳಗಾಗಿ ಆಯುಷ್ಮಾನ್‌ ಭಾರತ್- ಪ್ರಧಾನ ಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್‌ ವಿತರಣಾ ಗುರಿ ಹೊಂದಲಾಗಿದೆ. ಯೋಜನೆಯ ಒಟ್ಟು ಅನುದಾನದ ಪಾಲಿನಲ್ಲಿ ರಾಜ್ಯ ಸರ್ಕಾರ ಶೇ.66 ರಷ್ಟು ನೀಡುತ್ತಿದ್ದರೆ, ಕೇಂದ್ರ ಸರ್ಕಾರ 34% ನೀಡುತ್ತಿದೆ.

ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು Family Floater ಆಧಾರದ ಮೇಲೆ ಬಳಸಿಕೊಳ್ಳಬಹುದು.‌ APL ಕುಟುಂಬದವರಿಗೂ ಸಹ ಯೋಜನೆಯಲ್ಲಿ ಅವಕಾಶ ಕಲ್ಪಿಸಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. APL ಕುಟುಂಬಗಳಿಗೆ 5 ಲಕ್ಷದ ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನು ರಾಜ್ಯ ಸರ್ಕಾರ ಪಾವತಿಸಲಿದೆ. ಎಪಿಎಲ್ ಕಾರ್ಡ್​ ದಾರರು ಶೇ.70 ರಷ್ಟು ಚಿಕಿತ್ಸಾ ವೆಚ್ಚವನ್ನ ಪಾವತಿಸಿದರೆ, ಶೇ.30 ರಷ್ಟು ವೆಚ್ಚವನ್ನ ರಾಜ್ಯ ಸರ್ಕಾರ ಭರಿಸಲಿದೆ.

ಪ್ರಸ್ತುತ ರಾಜ್ಯದಲ್ಲಿ 3,450ಕ್ಕೂ ಹೆಚ್ಚು ಆರೋಗ್ಯ ಸಂಸ್ಥೆಗಳು“ಆಯುಷ್ಮಾನ್‌ ಭಾರತ್- “ಪ್ರಧಾನ ಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ ಸೇವೆ ನೀಡಲು ನೋಂದಾಯಿಸಿಕೊಂಡಿವೆ. ಸುಮಾರು 1650 ಚಿಕಿತ್ಸಾ ಪ್ಯಾಕೇಜ್‌ಗಳು ರಾಜ್ಯದ ಎಲ್ಲಾ ಸಾರ್ವಜಿಕ ಆಸ್ಪತ್ರೆ ಮತ್ತು 540 ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ.

171 ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಚಿಕಿತ್ಸೆ ಮತ್ತು ಜೀವ ಉಳಿಸುವ ಪ್ಯಾಕೇಜ್‌ಗಳನ್ನು ಒಳಗೊಂಡಿದೆ. ರಾಜ್ಯದಲ್ಲಿ 1.15 ಕೋಟಿ ಬಿಪಿಎಲ್‌ ಕುಟುಂಬಗಳಿದ್ದು, ಅದರಲ್ಲಿ 69 ಲಕ್ಷ SECC 2011 ಸಮೀಕ್ಷೆಯಂತೆ ಬಡತನ ರೇಖೆಗಿಂತ ಕೆಳಗಿವೆ. ಕೇಂದ್ರ ಸರ್ಕಾರ ಈ ಕುಟುಂಬಗಳಿಗೆ 60:40 ಅನುಪಾತದಲ್ಲಿ ಅನುದಾನ ಒದಗಿಸುತ್ತಿದೆ. ರಾಜ್ಯ ಸರ್ಕಾರವು ಉಳಿದ 46 ಲಕ್ಷ ಬಿಪಿಎಲ್‌ ಹಾಗೂ 19 ಲಕ್ಷ ಎಪಿಲ್‌ ಕುಟುಂಬಗಳಿಗೆ 100% ಅನುದಾನ ಒದಗಿಸುತ್ತಿದೆ.

ಆಯುಷ್ಮಾನ್‌ ಭಾರತ್‌-ಪ್ರಧಾನ ಮಂತ್ರಿ ಜನಾರೋಗ್ಯ ಯೋಜನಾ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ Co-branded ಗುರುತಿನ ಚೀಟಿಗಳಾಗಿವೆ. Co-branded ಗುರುತಿನ ಚೀಟಿಗಳನ್ನು ಉಚಿತವಾಗಿ ನೀಡಲಾಗುವುದು.‌ ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ID (ABHA ID) ಯೊಂದಿಗೆ ಜೋಡಿಸಲಾಗಿರುತ್ತದೆ. ಇದರಿಂದ ಫಲಾನುಭವಿಗಳ ವ್ಯೆದ್ಯಕೀಯ ದಾಖಲೆಗಳನ್ನು ಸಂರಕ್ಷಿಸಿ ಸುಲಭ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡಲು ನೆರವಾಗುತ್ತದೆ.

ಪಡಿತರ ಚೀಟಿಯೊಂದಿಗೆ ಜೋಡಿಸಿದ ಆಧಾರ್‌ ಗುರುತಿನ ಚೀಟಿಯ ಸಹಾಯದಿಂದ ಹತ್ತಿರದ ಗ್ರಾಮ-1 ಕೇಂದ್ರಗಳು ಅಥವಾ ನಾಗರಿಕ ಸೇವಾ ಆಯುಷ್ಮಾನ್‌ ಭಾರತ್ - ಪ್ರಧಾನ ಮಂತ್ರಿ ಜನಾರೋಗ್ಯ - ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಗುರುತಿನ ಚೀಟಿಗಳನ್ನು ಸುಲಭವಾಗಿ ನೋಂದಾಯಿಸಿ ಪಡೆಯಬಹುದಾಗಿರುತ್ತದೆ.

ಇದನ್ನೂಓದಿ: 30 ಸಾವಿರ ವಿದ್ಯಾರ್ಥಿಗಳಿಗೆ ಹಾಸ್ಟೆಲ್​ನಲ್ಲಿ ಹೆಚ್ಚುವರಿ ಪ್ರವೇಶಾವಕಾಶ : ಸಚಿವ ಶಿವರಾಜ್ ತಂಗಡಗಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.