ETV Bharat / state

ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆ ಬಗ್ಗೆ ಪರಿಶೀಲನೆ: ಸಿಎಂ ಸಿದ್ದರಾಮಯ್ಯ - ​ ETV Bharat Karnataka

ಬೆಳಗಾವಿ ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Dec 12, 2023, 10:51 PM IST

ಬೆಳಗಾವಿ : ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಲ್ಲಿ ಕ್ಯಾಬಿನೆಟ್ ಸಭೆಗಳನ್ನು ನಡೆಸಬೇಕು ಎನ್ನುವುದೂ ಸೇರಿ ಬಿ.ಎಲ್.ಶಂಕರ್ ಅವರು ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಆ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಸುವರ್ಣ ಸೌಧದ ವೈಭವದ ಹೊರ ಆವರಣದಲ್ಲಿ ನಡೆದ "ಕರ್ನಾಟಕ" ನಾಮಕರಣ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದ ಸಿಎಂ, ತ್ಯಾಗ ಮತ್ತು ಬಲಿದಾನದ ಮೂಲಕ ನಾಡು ಏಕೀಕರಣಗೊಂಡು ಕನ್ನಡ ನಾಡು ಉದಯವಾಯಿತು. ಕನ್ನಡ ನೆಲ-ಜಲ-ಭಾಷೆ-ಗಡಿ ರಕ್ಷಣೆಗೆ ನಾವು ಬದ್ಧರಾಗಿರುವುದೇ, ಕನ್ನಡ ವಾತಾವರಣ ನಿರ್ಮಾಣ ಮಾಡಿ ಇದನ್ನು ವಿಸ್ತರಿಸುವುದೇ ತ್ಯಾಗ ಬಲಿದಾನ ಮಾಡಿದ ಎಲ್ಲರಿಗೂ ನಾವು ಕೊಡುವ ಗೌರವ ಎಂದರು.

ಅಭಿವೃದ್ಧಿಯಲ್ಲಿ ದಾಪುಗಾಲು ಹಾಕುತ್ತಿದೆ : ಸುವರ್ಣ ಸಂಭ್ರಮಾಚರಣೆ ಹಾಗೂ ಕರ್ನಾಟಕ ವಿಧಾನ ಮಂಡಲದ ಮಾಜಿ ಸಭಾಪತಿ ಅವರು ಹಾಗೂ ಸಭಾಧ್ಯಕ್ಷರುಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕಳೆದ ಐವತ್ತು ವರ್ಷಗಳ ಅವಧಿಯಲ್ಲಿ ರಾಜ್ಯವು ಪ್ರತಿಯೊಂದು ಕ್ಷೇತ್ರದಲ್ಲಿ ಅಭಿವೃದ್ಧಿಯ ದಾಪುಗಾಲು ಹಾಕುತ್ತಿದೆ. ಪ್ರಾಚೀನ ಹಾಗೂ ಮಧ್ಯಕಾಲೀನ‌ ಇತಿಹಾಸದ ಪುಟಗಳನ್ನು ತಿರುವಿದಾಗ ಈ ನಾಡು ಭವ್ಯ ಪರಂಪರೆ, ಭೌಗೋಳಿಕ ವ್ಯಾಪ್ತಿ ಹೊಂದಿತ್ತು ಎಂದು ತಿಳಿಯುತ್ತದೆ. ಸಂಗೀತ, ಕಲೆ, ಸಾಂಸ್ಕೃತಿಕ ಕ್ಷೇತ್ರಕ್ಕೆ ನಾಡಿನ ಕೊಡುಗೆ ದೊಡ್ಡದು. ಶಿಕ್ಷಣ, ಔದ್ಯೋಗೀಕರಣದಲ್ಲಿಯೂ ರಾಜ್ಯ ಪ್ರಗತಿ ಸಾಧಿಸಿದೆ. ಕನ್ನಡ ಎಂಟು ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.

ದೇಶದಲ್ಲಿಯೇ ಅತಿಹೆಚ್ಚು ತೆರಿಗೆ ಪಾವತಿಸುವ ಎರಡನೇ ರಾಜ್ಯ ಕರ್ನಾಟಕವಾಗಿರುವುದು ಇಲ್ಲಿನ ಉದ್ಯೋಗಶೀಲತೆಗೆ ಸಾಕ್ಷಿಯಾಗಿದೆ. ಉತ್ತರದ ಬೆಳಗಾವಿಯಿಂದ ದಕ್ಷಿಣದ ಬೆಂಗಳೂರಿನವರೆಗೆ ನಾಡು ವೈವಿಧ್ಯಮಯ ಐತಿಹಾಸಿಕ, ನೈಸರ್ಗಿಕ ತಾಣಗಳನ್ನು ಹೊಂದಿದೆ. ಮುಂಬರುವ 25 ವರ್ಷಗಳ ಅವಧಿಯಲ್ಲಿ ರಾಜ್ಯದ ಸರ್ವಾಂಗೀಣ ಪ್ರಗತಿಗೆ ಸ್ಪಷ್ಟ ದಿಕ್ಸೂಚಿಯನ್ನು ರಾಜ್ಯ ಹಾಕಿಕೊಂಡು ಮಹಾನ್ ಕರ್ನಾಟಕ,ಮಹಾನ್ ಭಾರತ ನಿರ್ಮಿಸಬೇಕು ಎಂದು ನುಡಿದರು.

ಪ್ರೀತಿ ಪೂರ್ವಕ ದ್ವೇಷ ರಹಿತ ರಾಜ್ಯ ನಮ್ಮದು : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡ ನಂತರ ಆಗಿರುವ ಸರ್ವಾಂಗೀಣ ವಿಕಾಸಕ್ಕೆ ಕೊಡುಗೆ ನೀಡಿರುವ ಹಿರಿಯರನ್ನು ಸ್ಮರಿಸುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ. ಮುಂದಿನ ಪೀಳಿಗೆಗೆ ಒಂದು ಮಾದರಿಯಾದ ರಾಜ್ಯ ಮತ್ತು ಪರಂಪರೆಯನ್ನು ನಾವು ನೀಡುವ ಕೆಲಸ ಕಾರ್ಯಗಳನ್ನು ನಾವು ಮಾಡಬೇಕು.ಪ್ರೀತಿ ಪೂರ್ವಕ ದ್ವೇಷ ರಹಿತ ರಾಜ್ಯ ನಮ್ಮದು ಆ ಹಿರಿಮೆ ಗರಿಮೆ ಎತ್ತಿ ಹಿಡಿಯಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಹಿಂದಿನ ಹಿರಿಯರು ಸವೆಸಿದ ಹಾದಿ ಹಾಗೂ ಮಾರ್ಗದರ್ಶನ ಸದಾ ಕಾಲ ನಮಗೆ ಬೇಕು. ಸರ್ಕಾರ ಹಾಗೂ ವಿಧಾನಮಂಡಲದ ಸಮನ್ವಯ, ಸಹಕಾರದಿಂದ ಈ ಅರ್ಥಪೂರ್ಣ ಕಾರ್ಯಕ್ರಮ ಸಾಧ್ಯವಾಗಿದೆ ಎಂದರು.

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆ : ಇದಕ್ಕೂ ಮುನ್ನ ಸುವರ್ಣ ವಿಧಾನಸೌಧದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಹೂಡಿಕೆದಾರರು ಉದ್ಯಮ ಸ್ಥಾಪನೆಗೆ ಸಲ್ಲಿಸಿದ ಅರ್ಜಿಗಳ ಕುರಿತು ಎಲ್ಲ ಇಲಾಖೆಗಳು ನಿಗದಿತ ಕಾಲಮಿತಿಯಲ್ಲಿ ತಮ್ಮ ಅಭಿಪ್ರಾಯ ನೀಡಬೇಕು. ಎಲ್ಲ ಷರತ್ತುಗಳನ್ನು ಪೂರೈಸುವ ಸಂದರ್ಭದಲ್ಲಿ ಏಕಗವಾಕ್ಷಿ ವ್ಯವಸ್ಥೆಯಲ್ಲಿ 30 ದಿನಗಳೊಳಗೆ ಅನುಮೋದನೆ ನೀಡಬೇಕು. ಇಲ್ಲಿ ಒಪ್ಪಿಗೆ ಕೊಟ್ಟ ಬಳಿಕ ಕಡತಗಳು ಪುನಃ ವಿವಿಧ ಇಲಾಖೆಗಳಿಗೆ ಅಲೆಯುವಂತಾಗಬಾರದು ಎಂದು ಸಿದ್ದರಾಮಯ್ಯ ಸೂಚಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಸ್ತಾವನೆಗಳ ಪರಿಶೀಲನೆಯಲ್ಲಿ ವಿಳಂಬವಾಗುತ್ತಿರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು, ನಿಗದಿತ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದರು. ಪ್ರಸ್ತಾವನೆಗಳ ಕಡತ ಇಲಾಖೆಗಳ ಅಭಿಪ್ರಾಯಕ್ಕಾಗಿ ಬಂದಾಗ, ಇಲಾಖಾ ಸಚಿವರ ಗಮನಕ್ಕೆ ಈ ವಿಷಯವನ್ನು ಕಡ್ಡಾಯವಾಗಿ ತರಬೇಕು ಎಂದು ಸಿಎಂ ತಿಳಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌, ಸಚಿವರಾದ ಚೆಲುವರಾಯಸ್ವಾಮಿ, ಪ್ರಿಯಾಂಕ್‌ ಖರ್ಗೆ, ನಾಗೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ ಶಾಲಿನಿ ರಜನೀಶ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ : ಕಾನೂನು ಕಾಲೇಜುಗಳಲ್ಲಿ ಪ್ರವೇಶಾತಿ ಸೀಟುಗಳ ಪ್ರಮಾಣ ಹೆಚ್ಚಳಕ್ಕೆ ಕ್ರಮ: ಸಚಿವ ಎಚ್.ಕೆ.ಪಾಟೀಲ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.