ETV Bharat / state

ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

ಸಿಎಂ ಅವರು ಅಲ್ಪಸಂಖ್ಯಾತರಿಗೆ ಬಜೆಟ್​ನಲ್ಲಿ ಮೀಸಲಿಡುವುದಾಗಿ ನೀಡಿದ ಹೇಳಿಕೆಯನ್ನು ಬಿಜೆಪಿ ಓಲೈಕೆ ರಾಜಕಾರಣ ಎಂದಿರುವುದಕ್ಕೆ ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

CM Siddaramaiah
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Dec 5, 2023, 2:17 PM IST

Updated : Dec 5, 2023, 2:49 PM IST

ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯ ಸುವರ್ಣ ಸೌಧದ ಬಳಿ ಅವರು ಮಾತನಾಡಿದರು. ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್​ನಲ್ಲಿ ಮೀಸಲಿಡುವುದಾಗಿ ಸಿಎಂ ನೀಡಿದ್ದ ಹೇಳಿಕೆಯನ್ನು ಬಿಜೆಪಿ ಓಲೈಕೆ ರಾಜಕಾರಣ ಎಂದು ಕರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದರಲ್ಲಿ ತಪ್ಪೇನಿದೆ ಎಂದರು. ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದರು.

ಮೀಸಲು ನೀಡಿದ್ದರಲ್ಲಿ ಏನು ತಪ್ಪಿದೆ? ಮುಸ್ಲಿಮರೂ ಸೇರಿ ಎಲ್ಲರಿಗೂ ರಕ್ಷಣೆ ಕೊಡುತ್ತೇವೆ ಎಂದಿದ್ದೇನೆ. ಅದನ್ನು ಬಿಟ್ಟು ಬರೆದರೆ ಏನು ಮಾಡುವುದು?. ಅದು ತುಷ್ಟೀಕರಣನಾ?. ಅದಕ್ಕೆ ಉಪ್ಪು ಖಾರ ಹಾಕಿ ಹೇಳುತ್ತಿದ್ದಾರೆ ಅಷ್ಟೇ. ಮುಸ್ಲಿಮರೂ ಸೇರಿ ಎಲ್ಲರಿಗೂ ರಕ್ಷಣೆ ಕೊಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು .

ಮಾಜಿ ಡಿಸಿಎಂ ಅಶ್ವಥ್ ನಾರಾಯಣ್

ಸಿದ್ದರಾಮಯ್ಯ ತುಷ್ಠಿಕರಣ ಮಾಡ್ತಿದ್ದಾರೆ-ಅಶ್ವಥ್ ನಾರಾಯಣ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲರನ್ನು ಒಂದು ಎನ್ನುವ ಭಾವನೆ ಬರುವಂತಹ ಆಡಳಿತ ನೀಡಬೇಕು ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಆಗ್ರಹ ಮಾಡಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲರನ್ನೂ ಸಮಾನವಾಗಿ ನೋಡುವ ಕೆಲಸ ಮಾಡಬೇಕು ಎಂದರು.

ಮುಸ್ಲಿಂ ಸಮುದಾಯಕ್ಕೆ‌ 10 ಸಾವಿರ ಕೋಟಿ ರೂ. ಖರ್ಚು ಮಾಡುವ ಸಾಮರ್ಥ್ಯವಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬರಗಾಲ, ರೈತರ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಪರಿಹಾರ ಕೊಡಲು ಇವರ ಕಡೆಯಿಂದ ಆಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಎಲ್ಲರ ಕಿವಿಗೂ ಹೂವನ್ನು ಇಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ವಿಪಕ್ಷ ನಾಯಕ ಆರ್. ಅಶೋಕಗಿಂತ ಬಸನಗೌಡ ಪಾಟೀಲ ಯತ್ನಾಳ್​ ಅವರಿಗೆ ಹೆಚ್ಚು ಶಾಸಕರು ಬೆಂಬಲ ನೀಡುತ್ತಿರುವ ವಿಚಾರಕ್ಕೆ ನಮ್ಮ ಶಾಸಕರು ಯತ್ನಾಳ್​ ಅವರ ಬಳಿ ಸಮಸ್ಯೆ ಹೇಳಿಕೊಂಡರೆ ತಪ್ಪೇನು..? ಅಶೋಕ್​ಗಿಂತ ಯತ್ನಾಳ್​ಗೆ ಶಾಸಕರ ಬೆಂಬಲ ಹೆಚ್ಚು. ಯತ್ನಾಳ್ ಯತ್ನಾಳ್​ನೇ, ಅದೇ ರೀತಿ ಅಶೋಕ್​ ಆಶೋಕನೆ ಎಂದು ಅಶ್ವತ್ಥನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಹಿಂದೂಗಳನ್ನು ಸಿದ್ದರಾಮಯ್ಯ ಎರಡನೇ ದರ್ಜೆ ತರಹ ನೋಡ್ತಿದ್ದಾರೆ: ಆರ್ ಅಶೋಕ್​ ಕಿಡಿ

Last Updated : Dec 5, 2023, 2:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.