ETV Bharat / state

ಸಿಎಂ ವಿಡಿಯೋ ಸಂವಾದ: ಕೃಷಿ, ಅಗತ್ಯವಸ್ತು ಪೂರೈಕೆಗೆ ಆದ್ಯತೆ ನೀಡಲು ಸೂಚನೆ - ಮುಖ್ಯಮಂತ್ರಿ ಯಡಿಯೂರಪ್ಪ

ಕೋವಿಡ್-19 ನಿಯಂತ್ರಣ ಹಾಗೂ ಲಾಕ್​​​​ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದೆ ವಿಡಿಯೋ ಸಂವಾದದಲ್ಲಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಾತನಾಡಿದ ಸಿಎಂ ಯಡಿಯೂರಪ್ಪ, ಕೃಷಿ ಉತ್ಪನ್ನಗಳ ಮಾರಾಟ, ಸಾಗಾಣಿಕೆ, ಜನಸಾಮಾನ್ಯರಿಗೆ ಅಗತ್ಯವಿರುವ ದಿನಸಿ, ತರಕಾರಿಗಳು ಮತ್ತಿತರ ಸಾಮಗ್ರಿಗಳ ಸರಬರಾಜು ವ್ಯವಸ್ಥೆಯಲ್ಲಿ ಅನಾನುಕೂಲ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

CM Video Conversation: Instruction to prioritise agriculture and essential commodities
ಸಿಎಂ ವಿಡಿಯೋ ಸಂವಾದ: ಕೃಷಿ, ಅಗತ್ಯವಸ್ತು ಪೂರೈಕೆಗೆ ಆದ್ಯತೆ ನೀಡಲು ಸೂಚನೆ
author img

By

Published : Apr 8, 2020, 11:20 PM IST

ಬೆಳಗಾವಿ: ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಸೇರಿದಂತೆ ಯಾವುದೇ ರೀತಿಯ ತೊಂದರೆ ಇದ್ದರೆ ತಕ್ಷಣ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೋವಿಡ್-19 ನಿಯಂತ್ರಣ ಹಾಗೂ ಲಾಕ್​​ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದೆ ವಿಡಿಯೋ ಸಂವಾದದಲ್ಲಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಾತನಾಡಿದ ಅವರು, ಕೃಷಿ ಉತ್ಪನ್ನಗಳ ಮಾರಾಟ, ಸಾಗಾಣಿಕೆ, ಜನಸಾಮಾನ್ಯರಿಗೆ ಅಗತ್ಯವಿರುವ ದಿನಸಿ, ತರಕಾರಿಗಳು ಮತ್ತಿತರ ಸಾಮಗ್ರಿಗಳ ಸರಬರಾಜು ವ್ಯವಸ್ಥೆಯಲ್ಲಿ ಅನಾನುಕೂಲ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸೋಂಕು ಹರಡದಂತೆ ತಡೆಗಟ್ಟುವುದಕ್ಕೆ ಸಂಬಂಧಿಸಿದಂತೆ ಬೆಳಗಾವಿ ಸೇರಿದಂತೆ ಅನೇಕ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದಾದ ಬಳಿಕ ವಿಡಿಯೋ ಸಂವಾದ ಮುಂದುವರಿಸಿದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ರಾಜ್ಯದಲ್ಲಿ ಇನ್ನೂ ಹೆಚ್ಚಿನ ಜನರ ಗಂಟಲು ದ್ರವದ ಮಾದರಿಯನ್ನು ಪರಿಶೀಲಿಸಬೇಕು. ಇದಲ್ಲದೇ ಪಾಸಿಟಿವ್ ಪ್ರಕರಣ ದೃಢಪಟ್ಟಿರುವ ಕಂಟೈನ್ಮೆಂಟ್ ಝೋನ್​ನಲ್ಲಿ ಇರುವ ಪ್ರತಿಯೊಬ್ಬರ ಆರೋಗ್ಯವನ್ನು ತಪಾಸಣೆ ನಡೆಸಬೇಕು. 50 ವರ್ಷ ಮೇಲ್ಪಟ್ಟಿರುವವರ ತಪಾಸಣೆಗೆ ಆದ್ಯತೆ ನೀಡಬೇಕು ಎಂದರು.

ಸೋಂಕು ದೃಢಪಟ್ಟಿರುವ ಪ್ರತಿಯೊಬ್ಬ ವ್ಯಕ್ತಿಯ ಜೀವನ ಅಮೂಲ್ಯ. ಆದ್ದರಿಂದ ಎಲ್ಲರಿಗೂ ಅತ್ಯುತ್ತಮ ಚಿಕಿತ್ಸೆ ನೀಡಬೇಕು. ಅದರಲ್ಲೂ 60 ವರ್ಷ ಮೇಲ್ಪಟ್ಟವರಿಗೆ ವಿಶೇಷ ಚಿಕಿತ್ಸೆ ವ್ಯವಸ್ಥೆ ಮಾಡಬೇಕು. ಸೋಂಕಿನ ಲಕ್ಷಣಗಳು ಹೊಂದಿರುವ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಿರುವ ಮಾಹಿತಿಯನ್ನು ಮುಚ್ಚಿಡುವ ಖಾಸಗಿ ಆಸ್ಪತ್ರೆ ಅಥವಾ ವೈದ್ಯರ ವಿರುದ್ಧ ಪ್ರಕರಣ ದಾಖಲಿಸುವಂತೆ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.