ETV Bharat / state

ಪ್ರವಾಹ ಸಂತ್ರಸ್ತರ ಸಂಕಷ್ಟಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸಿಎಂ ಖಡಕ್​ ಸೂಚನೆ - ಪರಿಶೀಲನಾ ಸಭೆ,

ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿರುವ ಸಿಎಂ ಯಡಿಯೂರಪ್ಪ ಅವರು ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಪ್ರವಾಹದಲ್ಲಿ ಉಂಟಾದ ಹಾನಿಯ ಬಗ್ಗೆ ಮಾಹಿತಿ ಪಡೆದರು. ಅಲ್ಲದೆ, ಜನರ ಸಂಕಷ್ಟಕ್ಕೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಸಹ ನೀಡಿದ್ರು.

CM Yediyurappa
author img

By

Published : Oct 4, 2019, 8:29 AM IST

ಬೆಳಗಾವಿ: ಮುಖ್ಯಮಂತ್ರಿ ‌ಬಿ.ಎಸ್. ಯಡಿಯೂರಪ್ಪ ನಿನ್ನೆ ಜಿಲ್ಲೆಗೆ ಭೇಟಿ ನೀಡಿ ಪಕ್ಷದ ಎಲ್ಲಾ ಶಾಸಕರೊಂದಿಗೆ ಸಭೆ ನಡೆಸಿದರು.

ನಂತರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ಸಿಎಂ ಎಲ್ಲಾ ಪಕ್ಷದ ಶಾಸಕರ ಜೊತೆಗೆ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಿ ಪ್ರವಾಹದಲ್ಲಿ ಉಂಟಾದ ಹಾನಿಯ ಬಗ್ಗೆ ಮಾಹಿತಿ ಪಡೆದರು. ಜನರ ಸಂಕಷ್ಟಕ್ಕೆ ನೆರವಾಗುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ರು.

ಜಿಲ್ಲೆಯ ಅಧಿಕಾರಿಗಳೊಂದಿಗೆ ಸಿಎಂ ಸಭೆ

ಪ್ರವಾಹದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಐದು ಲಕ್ಷ ರೂಪಾಯಿ ಘೋಷಣೆ ಮಾಡಿದ್ದ ಸಿಎಂ, ಸ್ವತಃ ಆಯ್ದ ಕೆಲವು ತಾಲೂಕುಗಳ ಫಲಾನುಭವಿಗಳಿಗೆ ಒಂದು ಲಕ್ಷ ರೂ. ಚೆಕ್ ವಿತರಿಸಿದರು. ಮನೆ ಕಳೆದುಕೊಂಡು ಬೀದಿಗೆ ಬಿದ್ದಿರುವ ಜನರಿಗೆ ಮೊದಲ ಕಂತಿನಲ್ಲಿ ಒಂದು ಲಕ್ಷ ರೂ. ನೆರವು ನೀಡಿದ್ದು, ಸದ್ಯ ಮನೆ ಕಟ್ಟಿಕೊಳ್ಳಲು ಸಹಾಯವಾಗುವಂತೆ ಸಿಎಂ ಎಲ್ಲಾ ಫಲಾನುಭವಿಗಳಿಗೂ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಮೃತ ಪಿ‌ಎಸ್ಐ ಪತ್ನಿಗೆ 20 ಲಕ್ಷ ಪರಿಹಾರ:
ಪ್ರವಾಹ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್​ಐ ವೀರಪ್ಪ ಲಟ್ಟೆ ಎಂಬುವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಪತ್ನಿ ಕಸ್ತೂರಿ ಲಟ್ಟೆ ಅವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 20 ಲಕ್ಷ ಪರಿಹಾರದ ಚೆಕ್​ನ್ನು ಯಡಿಯೂರಪ್ಪ ವಿತರಿಸಿದರು.

ಸಿಎಂ ಪರಿಹಾರ ನಿಧಿಗೆ 1.90 ಕೋಟಿ ಚೆಕ್:
ಇದೇ ವೇಳೆ ಪ್ರವಾಹ ಬಾಧಿತ ಸಂತ್ರಸ್ತರಿಗೆ ನೆರವಾಗಲು ವಾಯವ್ಯ ಸಾರಿಗೆ ಸಂಸ್ಥೆ ಸುಮಾರು 1.90 ಕೋಟಿ ರೂಪಾಯಿಗಳ ಚೆಕ್​ನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ರು.

ಈ ಸಭೆಯಲ್ಲಿ ಪರಿಶೀಲನಾ ಸಭೆಯಲ್ಲಿ ಬೆಳಗಾವಿ ಶಾಸಕ ಅಭಯ್ ಪಾಟೀಲ್. ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಾಹಾದೇವಪ್ಪ ಯಾದವಾಡ ಸೇರಿದಂತೆ ಅನೇಕ ಶಾಸಕರು ಭಾಗಿಯಾಗಿದ್ದರು.

Intro:ಹೇಗಿತ್ತು ಇವತ್ತಿನ ಬಿಎಸ್ ವೈ ಬೆಳಗಾವಿ ಭೇಟಿ : ಕೇಂದ್ರದ ನೆರವಿಲ್ಲದೆಯೇ ಜನರ ಆಶೋತ್ತರ ಆಲಿಸಿದ ದೊರೆ

ಬೆಳಗಾವಿ : ಇಂದು ಮುಖ್ಯಮಂತ್ರಿ ‌ಬಿ.ಎಸ್ ಯಡಿಯೂರಪ್ಪ ಬೆಳಗಾವಿ ಭೇಟಿ ವಿಶೇಷವಾಗಿತ್ತು. ಕಳೆದ ಒಂದು ತಿಂಗಳಲ್ಲಿ ನಾಲ್ಕನೇ ಭಾರಿ ಸಿಎಂ ಬೆಳಗಾವಿಗೆ ಭೇಟಿ ನೀಡುತ್ತಿದ್ದು ಇಂದು ಪ್ರವಾಹದಲ್ಲಿ ಸಿಲುಕಿ ನಲುಗಿರುವ ಜನರಿಗಾಗಿ ವಿಶೇಷ ಸಭೆ ಮಾಡಿದರು. ಜೊತೆಗೆ ಕೇಂದ್ರದ ಅನುದಾನ ಇಲ್ಲದಿದ್ದರು ಜನರ ಕಣ್ಣೀರು ಒರೆಸುವ ಕೆಲಸ ಮಾಡಿದರು.

ಇಂದು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯಡಿಯೂರಪ್ಪ ಎಲ್ಲಾ ಪಕ್ಷದ ಶಾಸಕರ ಜೊತೆಗೆ ಅಧಿಕಾರಿಗಳ ಸಭೆ ನಡೆಸಿದರು. ಪ್ರವಾಹದಲ್ಲಿ ಉಂಟಾದ ಹಾನಿಯ ಬಗ್ಗೆ ಇಂಚಿಂಚು ಮಾಹಿತಿ ಪಡೆದ ಸಿಎಂ ಜನರ ಸಂಕಷ್ಟಕ್ಕೆ ನೆರವಾಗುವಂತೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಸಹ ನೀಡಿದರು. ಸ್ವಯಂ ಪಕ್ಷದ ಶಾಸಕರ ಪ್ರಶ್ನೆಗಳಿಗೆ ಉತ್ತಿರಿಸಿದ ಸಿಎಂ ವಿರೋಧ ಪಕ್ಷದ ಶಾಸಕರನ್ನು ನಯವಾಗಿ ಕಾಲೆಳೆದರು. ಜೊತೆಗೆ ಪ್ರವಾಹ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಜೊತೆಗೆ ಜಿಲ್ಲಾಧಿಕಾರಿಗಳ ವಿರುದ್ಧ ಗುಡಿಗಿದ ಘಟನೆಯು ಇಂದು ನಡೆಯಿತು.

Body:ಇಷ್ಟೇ ಅಲ್ಲದೆ ಈ ಹಿಂದೆ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಐದು ಲಕ್ಷ ರೂ ಘೋಷಣೆ ಮಾಡಿದ್ದ ಸಿಎಂ ಯಡಿಯೂರಪ್ಪ ಇಂದು ಸ್ವತಃ ಆಯ್ದ ಹಲವು ತಾಲೂಕುಗಳ ಫಲಾನುಭವಿಗಳಿಗೆ ಒಂದು ಲಕ್ಷ ರೂ. ಚೆಕ್ ವಿತರಣೆ ಮಾಡಿದರು. ಮನೆ ಕಳೆದುಕೊಂಡು ಬೀದಿಗೆ ಬಿದ್ದಿರುವ ಜನರಿಗೆ ಮೊದಲ ಕಂತಿನಲ್ಲಿ ಒಂದು ಲಕ್ಷ ರೂ ನೆರವು ನೀಡಿದ್ದು ಸಧ್ಯ ಮನೆ ಕಟ್ಟಿಕೊಳ್ಳಲು ಸಹಾಯವಾಗುವಂತೆ ಸಿಎಂ ಎಲ್ಲಾ ಫಲಾನುಭವಿಗಳಿಗೂ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ಸಹಾ ನೀಡಿದರು.

ಮೃತ ಪಿ‌ಎಸ್ಐ ಪತ್ನಿಗೆ 20 ಲಕ್ಷ ಪರಿಹಾರ:
ಪ್ರವಾಹ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿ.ಎಸ್.ಐ. ವೀರಪ್ಪ ಲಟ್ಟೆ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಪತ್ನಿ ಕಸ್ತೂರಿ ಲಟ್ಟೆ ಅವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 20 ಲಕ್ಷ ಪರಿಹಾರದ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿತರಿಸಿದರು.

Conclusion:ಸಿಎಂ ಪರಿಹಾರ ನಿಧಿಗೆ 1.90 ಕೋಟಿ ಚೆಕ್:
ಪ್ರವಾಹಬಾಧಿತ ಸಂತ್ರಸ್ತರಿಗೆ ನೆರವಾಗಲು ವಾಯವ್ಯ ಸಾರಿಗೆ ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡಮಾಡಿದ 1.90 ಕೋಟಿ ರೂಪಾಯಿ ಚೆಕ್ ಅನ್ನು ಮುಖ್ಯಮಂತ್ರಿ ಸ್ವೀಕರಿಸಿದರು.

ಸಿಎಂ ಯಡಿಯೂರಪ್ಪ ನಡೆಸಿದ ಪ್ರವಾಹ ಪೀಡಿತ ಪ್ರದೇಶಗಳ ಪರಿಹಾರ ಕಾರ್ಯಗಳ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಅನೇಕ ನಾಯಕರು ಭಾಗವಹಿಸಿದ್ದರು. ಬೆಳಗಾವಿ ಶಾಸಕ ಅಭಯ್ ಪಾಟೀಲ್. ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಾಹಾದೇವಪ್ಪ ಯಾದವಾಡ, ಉಳಿದ ಅನೇಕ ಶಾಸಕರು ತಮ್ಮ ಬೇಡಿಕೆ ಸಿಎಂ ಮುಂದೆ ಇಟ್ಟರು.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.