ಅಥಣಿ(ಬೆಳಗಾವಿ): 2017-18ನೇ ಸಾಲಿನಲ್ಲಿ ಪದವಿ ವ್ಯಾಸಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸರ್ಕಾರ ಲ್ಯಾಪ್ಟಾಪ್ ವಿತರಣೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಇಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಥಣಿಯಲ್ಲಿ ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
2019-20ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪ್ರಸಕ್ತ ಸಾಲಿನ ಲ್ಯಾಪ್ಟಾಪ್ ವಿತರಿಸಲಾಗುತ್ತಿದೆ. ಆದರೆ, ಈ ಹಿಂದೆಯೇ ನೋಂದಣಿ ಮಾಡಿಕೊಂಡಿರುವ 2017-18 ಹಾಗೂ 18-19ನೇ ಸಾಲಿನ ವಿದ್ಯಾರ್ಥಿಗಳು ಲ್ಯಾಪ್ಟಾಪ್ ಸೌಲಭ್ಯದಿಂದ ವಂಚಿತರಾಗಿದ್ದಾರೆ.
ಇನ್ನು ಸರ್ಕಾರ 2017-18ನೇ ಸಾಲಿನ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲು ಸುತ್ತೋಲೆ ಹೊರಡಿಸಿದ್ದು, ಕೆಲ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಲ್ಯಾಪ್ಟಾಪ್ ವಿತರಣೆ ಮಾಡಲಾಗಿದೆ. ಆದರೆ, ಇನ್ನುಳಿದ ವಿದ್ಯಾರ್ಥಿಗಳಿಗೆ ವಿತರಣೆ ಮಾಡಿಲ್ಲ. ಆದ್ದರಿಂದ ಕೂಡಲೇ ಈ ಕುರಿತು ಸರ್ಕಾರ ಕ್ರಮ ಕೈಗೊಂಡು ನಮಗೆ ಲ್ಯಾಪ್ಟಾಪ್ ನೀಡಬೇಕು ಎಂದು ಒತ್ತಾಯಿಸಿ ಮಹಾವಿದ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಲಾಯಿತು.