ETV Bharat / state

ಬೆಳಗಾವಿಯಲ್ಲಿ ಎರಡು ಸರ್ಕಾರಿ ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ: 10ಕ್ಕೂ ಹೆಚ್ಚು ಜನರಿಗೆ ಗಾಯ - ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯ

ಬೆಳಗಾವಿ - ಬಾಗಲಕೋಟೆ ರಸ್ತೆಯಲ್ಲಿ ಎರಡು ಸಾರಿಗೆ ಬಸ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಬಸ್​ಗಳಲ್ಲಿದ್ದ ಪ್ರಯಾಣಿಕರು ಹಾಗೂ ಚಾಲಕರು ಮತ್ತು ನಿರ್ವಾಹಕರಿಗೂ ಸಣ್ಣ- ಪುಟ್ಟ ಗಾಯಗಳಾಗಿವೆ.

collision-between-two-government-buses-in-belagavi-10-people-injured
ಬೆಳಗಾವಿಯಲ್ಲಿ ಎರಡು ಸರ್ಕಾರಿ ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ: 10ಕ್ಕೂ ಹೆಚ್ಚು ಜನರಿಗೆ ಗಾಯ
author img

By

Published : Jul 8, 2022, 3:05 PM IST

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಲಕಿ ಕ್ರಾಸ್ ಬಳಿ ಎರಡು ಸರ್ಕಾರಿ ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ.

ಬೆಳಗಾವಿ ನಗರದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಬಸ್​ ಮತ್ತು ಯರಗಟ್ಟಿಯಿಂದ ಬೆಳಗಾವಿಯತ್ತ ಬರುತ್ತಿದ್ದ ಮತ್ತೊಂದು ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ ಎರಡು ಬಸ್​ಗಳ ಮುಂಭಾಗ ನಜ್ಜುಗುಜ್ಜಾಗಿದೆ.

ಬೆಳಗಾವಿಯಲ್ಲಿ ಎರಡು ಸರ್ಕಾರಿ ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಘಟನೆಯಲ್ಲಿ ಬಸ್​ಗಳ ಚಾಲಕರು ಮತ್ತು ನಿರ್ವಾಹಕರು ಸಹ ಸೇರಿದಂತೆ ಹತ್ತಕ್ಕೂ ಅಧಿಕ ಜನರಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಮುರಗೋಡ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೊಪ್ಪಳದಲ್ಲಿ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು: ಚಾಲಕ ಸಾವು, ಮೂವರು ಪಾರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.