ETV Bharat / state

ಕಾಂಗ್ರೆಸ್ ಧರ್ಮದ ಆಧಾರದ ಮೇಲೆ ಇಷ್ಟು ದಿನ ಅಧಿಕಾರಕ್ಕೆ ಬಂದಿದೆ: ರಾಜನಾಥ್ ಸಿಂಗ್

author img

By

Published : Apr 26, 2023, 6:37 PM IST

ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್ ಪರ ಕೇಂದ್ರ ಸಚಿವ ರಾಜನಾಥ್​ ಸಿಂಗ್​ ಪ್ರಚಾರ ನಡೆಸಿದರು.

Union Defense Minister Rajnath Singh
ಕೇಂದ್ರ ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್​

ಚಿಕ್ಕೋಡಿ (ಬೆಳಗಾವಿ): ರಾಜ್ಯ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದೆ. ಬಿಜೆಪಿ- ಕಾಂಗ್ರೆಸ್​ ಪರ ಪ್ರಚಾರಕ್ಕಾಗಿ ರಾಷ್ಟ್ರೀಯ ನಾಯಕರೆಲ್ಲ ಕರ್ನಾಟಕಕ್ಕೆ ಆಗಮಿಸಿ ಪ್ರಚಾರ ಆರಂಭಿಸಿದ್ದಾರೆ. ಉಭಯ ಪಕ್ಷಗಳ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿವೆ.

ಭಾರತದ ಇತಿಹಾಸದಲ್ಲಿ ಯಾವುದೇ ರಾಜಕೀಯ ಪಕ್ಷವು ಅಧಿಕಾರಕ್ಕಾಗಿ ಧರ್ಮದ ಬೆಂಬಲವನ್ನು ಪಡೆದಿದ್ದರೆ, ಅದು ಕಾಂಗ್ರೆಸ್ ಆಗಿರುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದರು. ಅವರು ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭೆ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್ ಪರವಾಗಿ ಪ್ರಚಾರ ಸಮಾರಂಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷವು ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್​ ಧರ್ಮದ ರಾಜಕೀಯ ಮಾಡುತ್ತದೆ. ಈ ರೀತಿಯ ರಾಜಕೀಯ ಎಂದಿಗೂ ಮಾಡಬಾರದು. ಕೇವಲ ಮುಸ್ಲಿಮರನ್ನು ಓಲೈಸಲು ಧಾರ್ಮಿಕ ನೆಲೆಯಲ್ಲಿ ಶೇ 4ರಷ್ಟು ಮೀಸಲಾತಿ ನೀಡಲಾಗಿದೆ. ಆರ್ಥಿಕವಾಗಿ ದುರ್ಬಲವಾಗಿರುವ ಮುಸ್ಲಿಂ ಅಥವಾ ಕ್ರಿಶ್ಚಿಯನ್ ಸಮುದಾಯದವರು ಮೀಸಲಾತಿ ಪ್ರಯೋಜನಗಳನ್ನು ಪಡೆದರೆ ನಾವು ಸ್ವಾಗತಿಸುತ್ತೇವೆ. ಆದರೆ, ಭಾರತದ ಸಂವಿಧಾನವು ಧರ್ಮ ಆಧಾರಿತ ಮೀಸಲಾತಿಗೆ ಅನುಮತಿ ನೀಡುವುದಿಲ್ಲ ಎಂದು ರಕ್ಷಣಾ ಸಚಿವರು ಹೇಳಿದರು.

ಮಾದರಿ ನೀತಿ ಸಂಹಿತೆ ಜಾರಿಯಾಗುವ ಕೆಲವೇ ದಿನಗಳ ಮೊದಲು, ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ರದ್ದುಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ತೀರ್ಮಾನ ಕೈಗೊಂಡಿತು. ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿ ನೀಡಿದ್ದ ಶೇ 4ರಷ್ಟು ಮೀಸಲಾತಿಯನ್ನು ಈಗ ಹೊಸದಾಗಿ ಸೃಷ್ಟಿಸಿರುವ ಪ್ರವರ್ಗ 2ಸಿ ಅಡಿ ಬರುವ ಒಕ್ಕಲಿಗರು ಮತ್ತು ಇತರ ಸಮುದಾಯಗಳಿಗೆ ಹಾಗೂ ಪ್ರವರ್ಗ 2ಡಿ ಅಡಿ ಬರುವ ವೀರಶೈವ ಲಿಂಗಾಯತ ಮತ್ತು ಇತರ ಸಮುದಾಯಗಳಿಗೆ ಹಂಚಿಕೆ ಮಾಡಲಾಗಿದೆ. ಮುಸ್ಲಿಮರನ್ನು ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯಎಸ್‌) ಪಟ್ಟಿಗೆ ಸೇರಿಸುವ ನಿರ್ಧಾರವನ್ನೂ ತೆಗೆದುಕೊಂಡಿತ್ತು.

ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ವಿವಿಧ ಮುಸ್ಲಿಂ ಸಂಘ ಸಂಸ್ಥೆಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಆದೇಶಕ್ಕೆ ತಡೆ ನೀಡಿದೆ. ಇಡೀ ಜಗತ್ತಿಗೆ ತಿಳಿದಿರುವಂತೆ ಬಿಜೆಪಿಯ ಪಾತ್ರದ ಬಗ್ಗೆ 'ಮರೆಮಾಚಲು ಏನೂ ಇಲ್ಲ'. ಬಿಜೆಪಿ ಎಂದಿಗೂ ಜಾತಿ, ಮತ ಮತ್ತು ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡುವುದರಲ್ಲಿ ನಂಬಿಕೆಯನ್ನಿಟ್ಟಿಲ್ಲ. ಬಿಜೆಪಿಯು ನ್ಯಾಯ ಮತ್ತು ಮಾನವೀಯತೆಯಲ್ಲಿ ನಂಬಿಕೆ ಇಟ್ಟಿದೆ. 12ನೇ ಶತಮಾನದ ಕರ್ನಾಟಕ ಸಮಾಜ ಸುಧಾರಕ ಬಸವೇಶ್ವರರ ತತ್ವಗಳನ್ನು ಬಿಜೆಪಿ ಅನುಸರಿಸಿದೆ ಎಂದು ಅವರು ಹೇಳಿದರು.

ಬಸವೇಶ್ವರರ ತತ್ವಾದರ್ಶಗಳನ್ನು ಪಾಲಿಸುವ ಮೂಲಕ ಭಾರತದಲ್ಲಿ ಬಿಜೆಪಿ ತನ್ನ ಪಾತ್ರವನ್ನು ನಿರ್ವಹಿಸುತ್ತಿದೆ. 224 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿಗೆ ಮೂರನೇ ಎರಡರಷ್ಟು ಬಹುಮತ ನೀಡುವಂತೆ ಸಿಂಗ್ ಕರ್ನಾಟಕದ ಜನತೆಗೆ ಮನವಿ ಮಾಡಿದರು.

ಇದನ್ನೂ ಓದಿ: ಕೇಂದ್ರದ ಯೋಜನೆಗಳಲ್ಲಿ ಮುಸಲ್ಮಾನರನ್ನು ಹೊರಗಿಟ್ಟಿದ್ದು ತೋರಿಸಿದರೆ ರಾಜಕೀಯ ನಿವೃತ್ತಿ: ರಾಜೀವ್ ಚಂದ್ರಶೇಖರ್ ಸವಾಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.