ಬೆಳಗಾವಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಕೈಗೊಂಡಿದ್ದ ಜನಪರ ಯೋಜನೆಗಳನ್ನು ಪರಿಗಣಿಸಿ ಜನರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮನವಿ ಮಾಡಿದರು.
ಗೋಕಾಕ ವಿಧಾನಸಭಾ ಮತಕ್ಷೇತ್ರದ ಬೆಣಚಿನಮರಡಿ, ಕೊಳವಿ, ಖನಗಾಂವ, ಮಕ್ಕಳಗೇರಿ ಗ್ರಾಮಗಳಲ್ಲಿ ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ನಮ್ಮ ಸರ್ಕಾರದ ಅವಧಿಯಲ್ಲಿ ರೈತರಿಗೆ ಸಾಕಷ್ಟು ಅನುಕೂಲ ಕಲ್ಪಿಸಲಾಗಿತ್ತು. ಕೃಷಿ ಹೊಂಡ ನಿರ್ಮಾಣ, ವಿವಿಧ ನೀರಾವರಿ ಯೋಜನೆಗಳು, ಸಾಲಮನ್ನಾ ಸೇರಿ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿತ್ತು. ಬಡವರು ಹಾಗೂ ಬಡವರ ಮಕ್ಕಳ ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು ಎಂದರು.
ಲೋಕಸಭಾ ಚುನಾವಣೆಯಲ್ಲಿ ನಾನು ಆಯ್ಕೆಯಾದರೇ ಸಮಗ್ರ ಬೆಳಗಾವಿಯ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ಕ್ಷೇತ್ರದ ಹಳ್ಳಿ, ಹಳ್ಳಿಗೂ ಸುತ್ತಾಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತೇನೆ. ಚುನಾವಣೆಯಲ್ಲಿ ಮತದಾರರು ನನಗೆ ಆಶೀರ್ವಾದ ಮಾಡುವ ಮೂಲಕ ಒಂದು ಬಾರಿ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.