ಬೆಳಗಾವಿ: ದಿನದಿಂದ ದಿನಕ್ಕೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗುತ್ತಿದೆ. ಬೇರೆ ಪಕ್ಷದ ಸಾಕಷ್ಟ ಜನರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಹೀಗಾಗಿ ನನ್ನ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಕೆಟ್ ಘೋಷಣೆ ಆದ ದಿನದಿಂದಲೂ ನಮ್ಮ ಎಲ್ಲ ಕಾರ್ಯಕರ್ತರು ಸಕ್ರಿಯರಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ಸಿದ್ದರಾಮಯ್ಯವರು ಇಂದು ಮತ್ತು ನಾಳೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅದೇ ರೀತಿ ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ನಮ್ಮ ಪರವಾಗಿ ಪ್ರಚಾರ ಮಾಡಿದ್ದಾರೆ. ಒಳ್ಳೆಯ ರೀತಿಯಲ್ಲಿ ಪ್ರಚಾರ ಸಾಗುತ್ತಿದೆ. ನಮ್ಮ ಪರವಾಗಿ ಒಳ್ಳೆಯ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ : 'ಬಿಜೆಪಿ ಧೃತಿಗೆಟ್ಟಿದೆ, ಸೋಲಿನ ಭೀತಿಯಿಂದ ಹಣ ಹಂಚಲು ಮುಂದಾಗಿದೆ'