ETV Bharat / state

'ಪಕ್ಷ ಸಂಘಟನೆಗಾಗಿ ಕಾಂಗ್ರೆಸ್​ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗೂ ಚುರುಕು ನೀಡುತ್ತಿದೆ' - ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಚುರುಕು

ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಕಾಂಗ್ರೆಸ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗೂ ಚುರುಕು ನೀಡುತ್ತಿದೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಕರ್ನಾಟಕದ ರಾಷ್ಟ್ರೀಯ ಉಸ್ತುವಾರಿ ಬಿನಿತಾ ಓರಾ ಹೇಳಿದರು.

cong
cong
author img

By

Published : Jan 23, 2021, 8:50 PM IST

ಬೆಳಗಾವಿ: ಬೂತ್ ಮಟ್ಟದಲ್ಲಿಯೂ ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಗೂ ಚುರುಕು ನೀಡುತ್ತಿದೆ. ಬೆಳಗಾವಿ ವಿಭಾಗದ ಆರು ಜಿಲ್ಲೆಗಳಲ್ಲಿ ಅವಲೋಕನ ಸಭೆ ನಡೆಸಲು ಇದೀಗ ಮುಂದಾಗಿದೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಕರ್ನಾಟಕದ ರಾಷ್ಟ್ರೀಯ ಉಸ್ತುವಾರಿ ಬಿನಿತಾ ಓರಾ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯವರು ಬೆಳಗಾವಿಯಲ್ಲಿ 1924ರಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ನೆಲದಿಂದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಯಾತ್ರೆ ಆರಂಭಿಸಿಲು ಹೆಮ್ಮೆ ಎನಿಸುತ್ತದೆ. ಈ‌ ಕಾರ್ಯಕ್ರಮದಿಂದ ತಳಮಟ್ಟದಿಂದ ರಾಷ್ಟ್ರೀಯತೆ ಬಗ್ಗೆ ಅರಿವು ಮೂಡಿಸಲಾಗುವುದು. ಹೀಗಾಗಿ ಜ. 26ರವರೆಗೆ ಬೆಳಗಾವಿ, ಗದಗ, ವಿಜಯಪುರ, ಬಾಗಲಕೋಟೆ, ಚಿಕ್ಕೋಡಿ ವಿಭಾಗ ಸೇರಿ ಒಟ್ಟು 6 ಜಿಲ್ಲೆಗಳಲ್ಲಿ ಸಂಘಟನೆ ಸಭೆ ನಡೆಸಲಿದ್ದೇವೆ ಎಂದರು.

ಕಾಂಗ್ರೆಸ್ ಸುದ್ದಿಗೋಷ್ಠಿ

ಸಭೆಯಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುವುದು. ಮುಂದೆ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಕುರಿತು ರುಪುರೇಷೆ ಸಿದ್ಧಪಡಸಲಿದ್ದೇವೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಸಾಮಾನ್ಯ ಜನರಿಗೂ ಅಧಿಕಾರ ನೀಡಬೇಕು. ಅಧಿಕಾರ ವಿಕೇಂದ್ರಿಕರಣ ಮಾಡುವ ಉದ್ದೇಶದಿಂದ ಗ್ರಾಮ ಪಂಚಾಯತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬಿದ್ದಾರೆ. ಅವರ ಕನಸಿನಂತೆ ರಾಜೀವ್ ಗಾಂಧಿ ಯಾತ್ರೆ ಮೂಲಕ ಈ ಕಾರ್ಯಕ್ರಮವನ್ನು ಆರು ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.