ಬೆಳಗಾವಿ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸಂಜಯ್ ಪಾಟೀಲ್ ಅಧ್ಯಕ್ಷರಿರುವ ಗೋಮಟೇಶ್ ವಿದ್ಯಾಪೀಠ ಶಿಕ್ಷಣ ಸಂಸ್ಥೆ ಎದುರು ಪ್ರತಿಭಟನೆ ನಡೆಸಿದ ಕೈ ಕಾರ್ಯಕರ್ತರು, ಸಂಜಯ್ ಭಾವಚಿತ್ರ ವಿರುವ ಬ್ಯಾನರ್‌ಗೆ ಚಪ್ಪಲಿ ಏಟು ನೀಡಿದರು.
ಶಿಕ್ಷಣ ಸಂಸ್ಥೆ ಎದುರು ಪ್ರತಿಭಟಿಸದಂತೆ ಟಿಳಕವಾಡಿ ಠಾಣೆ ಸಿಪಿಐ ರಾಘವೇಂದ್ರ ತಹಶೀಲ್ದಾರ್ ಮನವಿ ಮಾಡಿದರು. ಕ್ಯಾರೇ ಎನ್ನದೇ ಕಾಂಗ್ರೆಸ್ ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರೆಸಿದರು.
ಶಿಕ್ಷಣ ಸಂಸ್ಥೆ ಎದುರು ಪ್ರತಿಭಟನೆ ನಡೆಸುತ್ತಿರುವುದಕ್ಕೆ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿ, ಸಂಜಯ್ ಪಾಟೀಲ್ ಮನೆ, ಕಚೇರಿ ಎದುರು ಪ್ರತಿಭಟನೆ ನಡೆಸುವಂತೆ ಮನವಿ ಮಾಡಿದರು.
ಆದ್ರೆ, ಪೋಷಕರ ವಿರುದ್ಧವೇ ಕಾಂಗ್ರೆಸ್ ಕಾರ್ಯಕರ್ತೆಯರು ಮುಗಿಬಿದ್ದರು. ಆಗ ಕಾಂಗ್ರೆಸ್ ಕಾರ್ಯಕರ್ತೆಯರು ವಿರುದ್ಧ ಪೋಷಕಿ ನಿರ್ಮಲಾ ಆಕ್ರೋಶ ವ್ಯಕ್ತಪಡಿಸಿದರು.