ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕುಂದಾನಗರಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿಭಟನೆಯಲ್ಲಿ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಗೈರಾಗಿದ್ದರು.
ಕಾಂಗ್ರೆಸ್ನ ಎಲ್ಲಾ ಮುಖಂಡರು ಪ್ರತಿಭಟನೆಯಲ್ಲಿ ಭಾಗಿವಹಿಸಿದ್ದು, ಜಿ.ಪರಮೇಶ್ವರ್ ಗೈರಿಗೆ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಶಿಷ್ಯರು ಮುಂದಾಳತ್ವ ವಹಿಸಿದ್ದು, ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಿಎಂ ನೇತೃತ್ವದಲ್ಲಿ ಮುಖಂಡರ ಸಭೆ ನಡೆಯಿತು.
ಸಭೆಯಲ್ಲಿ ದಿನೇಶ್ ಗುಂಡೂರಾವ್, ಈಶ್ವರ ಖಂಡ್ರೆ, ರಮೇಶ್ ಕುಮಾರ್, ಪ್ರಕಾಶ್ ಹುಕ್ಕೇರಿ, ಆರ್.ವಿ ದೇಶಪಾಂಡೆ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದು, ಪರಮೇಶ್ವರ್ ಗೈರು ಎದ್ದುಕಾಣುತಿತ್ತು.