ಚಿಕ್ಕೋಡಿ : ತೈಲ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಮೂಲಕ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಾಲ್ನಡಿಗೆಯಲ್ಲಿ ಪ್ರತಿಭಟನೆ ಪ್ರಾರಂಭಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿರುದ್ಧ ಘೋಷಣೆಯನ್ನು ಕೂಗಿದರು.
ಮಾಹಾಮಾರಿ ಕೊರೊನಾ ಲಾಕ್ಡೌನ್ನಿಂದಾಗಿ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಇಂತಹ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡುತ್ತಿದೆ. ಬಡವರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುತ್ತಿದೆ ಎಂದು ಆರೋಪಿಸಿದ ಅವರು, ಕೂಡಲೇ ದರವನ್ನು ಇಳಿಸಬೇಕೆಂದು ಒತ್ತಾಯಿಸಿ ಚಿಕ್ಕೋಡಿ ಉಪವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.