ETV Bharat / state

ಕಾಂಗ್ರೆಸ್​ನವರು ಹತ್ತಲ್ಲ 15 ಕೆ.ಜಿ ಅಕ್ಕಿ ಕೊಡಬೇಕು: ಶಶಿಕಲಾ ಜೊಲ್ಲೆ - Shashikala Jolle

ಈಗಾಗಲೇ ರಾಜ್ಯದಲ್ಲಿ ನೀಡುತ್ತಿರುವ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರದ್ದು. ಅದನ್ನು ಹೊರತುಪಡಿಸಿ ಕಾಂಗ್ರೆಸ್ ಸರ್ಕಾರ​ ಜನರಿಗೆ ಹತ್ತು ಕೆಜಿ ಅಕ್ಕಿ ಕೊಡಬೇಕು ಎಂದು ಶಶಿಕಲಾ ಜೊಲ್ಲೆ ಒತ್ತಾಯಿಸಿದರು.

Former Minister Shashikala Jolle
ಮಾಜಿ ಸಚಿವೆ ಶಶಿಕಲಾ ಜೊಲ್ಲೆ
author img

By

Published : Jun 20, 2023, 6:30 PM IST

ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮಗೋಷ್ಟಿ

ಚಿಕ್ಕೋಡಿ (ಬೆಳಗಾವಿ): ಕಾಂಗ್ರೆಸ್ ನಾಯಕರು ಚುನಾವಣೆಯ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್​ದಾರರ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದೆಂದು ಗ್ಯಾರಂಟಿ ಕಾರ್ಡ್​ಗಳನ್ನು ನೀಡಿದ್ದಾರೆ. ಆದರೆ ಆ ಭರವಸೆಗಳನ್ನು ಅವರಿಗೆ ಈಡೇರಿಸಲು ಆಗುತ್ತಿಲ್ಲ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪ ಹಾಕಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್​ ಪಕ್ಷದ ಈ ಪ್ರತಿಭಟನೆ ಖಂಡಿಸುತ್ತೇವೆ ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿ, ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನವರು ರಾಜ್ಯದ ಜನರಿಗೆ ಹಲವಾರು ಭರವಸೆಗಳನ್ನು ನೀಡಿದ್ದಾರೆ. ಆದರೆ ಸರಿಯಾಗಿ ಅವುಗಳನ್ನು ಅನುಷ್ಠಾನ ಮಾಡದೆ ಇನ್ನೊಬ್ಬರ ಮೇಲೆ ಬೊಟ್ಟು ಮಾಡಿ, ಕೇಂದ್ರ ಸರ್ಕಾರವನ್ನು ತಪ್ಪಿತಸ್ಥರ ಸ್ಥಾನದಲ್ಲಿ ನಿಲ್ಲಿಸೋಕೆ ಪ್ರಯತ್ನ ಮಾಡುತ್ತಿದ್ದಾರೆ. ಇವತ್ತು ಅಕ್ಕಿಯ ವಿಚಾರವಾಗಿ ರಾಜ್ಯಾದ್ಯಂತ ಕಾಂಗ್ರೆಸ್​ನವರು ಪ್ರತಿಭಟನೆ ನಡೆಸಿದ್ದಾರೆ.

ಚುನಾವಣೆಯಲ್ಲಿ ಹೇಳಿದಂತೆ ಕಾಂಗ್ರೆಸ್​ನವರು 10 ಕೆಜಿ ಅಕ್ಕಿ ನೀಡಬೇಕು. ಇದರಲ್ಲಿ ಕೇಂದ್ರದಿಂದ 5 ಕೆಜಿ ಬರುತ್ತೆ, ಕೇಂದ್ರ ಸರ್ಕಾರದಿಂದ ಬರುವ ಐದು ಕೆಜಿ ಅಕ್ಕಿ ಬಿಟ್ಟು ಕಾಂಗ್ರೆಸ್​ನವರು ನುಡಿದಂತೆ ನಡೆದು ಹತ್ತು ಕೆಜಿ ಜೊತೆಗೆ ಕೇಂದ್ರ ಸರ್ಕಾರದ ಐದು ಕೆಜಿ ಸೇರಿಸಿ ಕರ್ನಾಟಕದ ಜನತೆಗೆ 15 ಕೆಜಿ ಅಕ್ಕಿ ವಿತರಣೆ ಮಾಡಬೇಕೆಂದು ಕಾಂಗ್ರೆಸ್​​ನವರಿಗೆ ಸವಾಲು ಎಸಗಿದರು.

ಕಾಂಗ್ರೆಸ್​ನವರಿಗೆ ನುಡಿದಂತೆ ನಡೆಯೋಕೆ ಆಗುತ್ತಿಲ್ಲ. ಅಕ್ಕಿ ವಿಚಾರದಲ್ಲಿ ಸುಳ್ಳು ನೆಪ ಹೇಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಹೇಳಿ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್​ನವರಿಗೆ ಕುಣಿಯೋದಿಕ್ಕೆ ಬರಲ್ಲ, ಆದರೆ ನೆಲ ಡೊಂಕು ಅಂತ ಹೇಳುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನೀವು 10 ಕೆಜಿ ಅಕ್ಕಿ ಕೊಡುತ್ತೇವೆ ಅಂತ ಹೇಳಿದ್ದೀರಿ, ಕೇಂದ್ರದಿಂದ ಬರುವ 5 ಕೆಜಿ ಅಕ್ಕಿ ಬಿಟ್ಟು ನೀವು ಕರ್ನಾಟಕ ಜನರಿಗೆ 10 ಕೆಜಿ + ಕೇಂದ್ರದ 5 ಕೆಜಿ ಅಕ್ಕಿ ಸೇರಿ 15 ಕೆಜಿ ನೀಡಿ, ಜನರಿಗೆ ಅಕ್ಕಿ ಕೊಡೋದು ಬಿಟ್ಟು ಸುಮ್ಮನೆ ಬಿಜೆಪಿ ಮೇಲೆ ಆಪಾದನೆ ಮಾಡುತ್ತಿದ್ದೀರಿ. ಆರೋಪ ಮಾಡುವುದನ್ನು ಬಿಟ್ಟುಬಿಡಿ ಎಂದು ಕಾಂಗ್ರೆಸ್ ವಿರುದ್ಧ ಶಶಿಕಲಾ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಅಕ್ಕಿ ಕೊರತೆಯನ್ನು ನೀಗಿಸಲು ಕಾಂಗ್ರೆಸ್​ ಸರ್ಕಾರ ಅಕ್ಕಿಗೆ ಬೇಡಿಕೆ ಇಟ್ಟು ಸಲ್ಲಿಸಿರುವ ಮನವಿಯನ್ನು ಕೇಂದ್ರ ಸರ್ಕಾರ ನಿರಾಕರಿಸಿರುವುದರ ವಿರುದ್ಧ ಇಂದು ಕಾಂಗ್ರೆಸ್​ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.

ಇದನ್ನೂ ಓದಿ: Congress Protest: ಅನ್ನಭಾಗ್ಯಕ್ಕೆ ಅಕ್ಕಿ ನೀಡಲು ನಕಾರ ಆರೋಪ.. ಕೇಂದ್ರ ಸರ್ಕಾರದ ವಿರುದ್ಧ ಮಳೆಯ ನಡುವೆಯೂ ಕಾಂಗ್ರೆಸ್ ಪ್ರತಿಭಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.