ಚಿಕ್ಕೋಡಿ/ಬೆಳಗಾವಿ : ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಜಿ.ಪಂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.
ಜಿ.ಪಂ. ಸದಸ್ಯ ತವಗಮಠ ಅವರು ಅನಾರೋಗ್ಯದಿಂದ ನಿಧನರಾದ ಹಿನ್ನೆಲೆಯಲ್ಲಿ ಉಳಿದ ಒಂದು ವರ್ಷದ ಅವಧಿಗೆ ಈ ಉಪಚುನಾವಣಾ ನಡೆದಿತ್ತು. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಹಾಂತೇಶ ಮಲ್ಲಪ್ಪ ಮಗದುಮ್ ಅವರು ಗೆಲುವು ಸಾಧಿಸುವುದರ ಮೂಲಕ ಹೆಬ್ಬಾಳ ಜಿ.ಪಂ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಕ್ಷೇತ್ರದ ಹೆಬ್ಬಾಳ ಜಿಲ್ಲಾ ಪಂಚಾಯತ ಕ್ಷೇತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಹಾಂತೇಶ ಮಗದುಮ್ ಜಯಭೇರಿಯಾಗಿದ್ದು, ಬಿಜೆಪಿಯಿಂದ ಸತೀಶ್ ಮಗದುಮ್ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಮಗದುಮ್ 11,298 ಮತಗಳು ಬಂದರೆ ಬಿಜೆಪಿ ಅಭ್ಯರ್ಥಿ ಸತೀಶ್ ಮಗದುಮ್ಗೆ 5,850 ಮತ ಪಡೆದುಕೊಂಡಿದ್ದಾರೆ. ಒಟ್ಟು 5,448 ಮತಗಳ ಅಂತರದಿಂದ ಕಾಂಗ್ರೆಸ್ ಗೆ ಜಯ ಲಭಿಸಿದೆ. ಸತೀಶ್ ಜಾರಕಿಹೋಳಿಗೆ ಪ್ರತಿಷ್ಠೆಯ ಕಣವಾಗಿದ್ದ ಹೆಬ್ಬಾಳ ಜಿಲ್ಲಾ ಪಂಚಾಯತ್ ಉಪಚುನಾವಣೆ ಕಾಂಗ್ರೆಸ್ ಗೆಲುವು ಸಾಧಿಸಿದ್ದು. ಎಲ್ಲೆಡೆ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಜೋರಾಗಿದೆ.