ಬೆಳಗಾವಿ: ಜಿಲ್ಲಾಧಿಕಾರಿ ಸರ್ಕಾರಿ ನಿವಾಸದಲ್ಲಿ ಕರ್ತವ್ಯ ನಿರತ ಪೇದೆಯೊಬ್ಬರು ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿರುವ ಬೆಳಗಾವಿ ಜಿಲ್ಲಾಧಿಕಾರಿ ಡಾ. ಎಸ್.ಬಿ ಬೊಮ್ಮನಹಳ್ಳಿ ನಿವಾಸದಲ್ಲಿ ಈ ಘಟನೆ ನಡೆದಿದೆ.
ಸಿಟಿ ರಿಸರ್ವ್ ಪೊಲೀಸ್ ಪೇದೆ ಪ್ರಕಾಶ್ ಗುರನ್ನವರ (30) ಆತ್ಮಹತ್ಯೆಗೆ ಶರಣಾದ ಪೇದೆ. ಡಿಸಿ ನಿವಾಸದಲ್ಲಿರುವ ಸೆಕ್ಯೂರಿಟಿ ರೂಮ್ ನಲ್ಲಿ ರಾತ್ರಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸದ ಒತ್ತಡವೇ ಆತ್ಮಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.
ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿ ಎಸ್.ಬಿ. ಬೊಮ್ಮನಹಳ್ಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.