ETV Bharat / state

ಮೈಸೂರು, ಹಾಸನ ಜಿಲ್ಲೆಯಲ್ಲಿ ಅರ್ಜುನ ಆನೆಯ ಸ್ಮಾರಕ ನಿರ್ಮಾಣ: ಸಚಿವ ಈಶ್ವರ ಖಂಡ್ರೆ - ಅರ್ಜುನ ಆನೆಯ ಸ್ಮಾರಕ

ಮೈಸೂರು ದಸರಾದ ಕೇಂದ್ರಬಿಂದುವಾಗಿದ್ದ ಅರ್ಜುನ ಆನೆಯ ಸ್ಮಾರಕವನ್ನು ಮೈಸೂರು ಮತ್ತು ಹಾಸನ ಜಿಲ್ಲೆಯಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್​ ಖಂಡ್ರೆ ಹೇಳಿದ್ದಾರೆ.

construction-of-arjuna-elephant-memorial-in-hassan-and-mysore-district-says-minister-ishwara-khandre
ಮೈಸೂರು, ಹಾಸನ ಜಿಲ್ಲೆಯಲ್ಲಿ ಅರ್ಜುನ ಆನೆಯ ಸ್ಮಾರಕ ನಿರ್ಮಾಣ: ಸಚಿವ ಈಶ್ವರ ಖಂಡ್ರೆ
author img

By ETV Bharat Karnataka Team

Published : Dec 5, 2023, 9:01 PM IST

ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಳಗಾವಿ: ಮೈಸೂರಿನ ಜಗದ್ವಿಖ್ಯಾತ ದಸರಾ ಜಂಬೂಸವಾರಿಯಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸ್ಮಾರಕವನ್ನು ಹಾಸನ ಮತ್ತು ಮೈಸೂರು ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ ಆನೆ ಕಾರ್ಯಾಚರಣೆ ವೇಳೆ ಪುಂಡಾನೆಯ ಜೊತೆ ಕಾದಾಡಿ ಕ್ಯಾಪ್ಟನ್, ಸೀನಿಯರ್, ಬಲಭೀಮ ಎಂದೇ ಖ್ಯಾತವಾಗಿದ್ದ ಅರ್ಜುನ ಅಸುನೀಗಿತ್ತು.

ಸುವರ್ಣಸೌಧದಲ್ಲಿಂದು ಅರ್ಜುನನ ಸಾವಿನ ಬಗ್ಗೆ ಶೋಕ ವ್ಯಕ್ತಪಡಿಸಿದ ಖಂಡ್ರೆ, ನಾಡಿನ ಜನರ ಪ್ರೀತಿಗೆ ಪಾತ್ರನಾಗಿದ್ದ ಅರ್ಜನನ ಸಾವು ಅತ್ಯಂತ ದುಃಖದಾಯಕ. ಅರ್ಜುನ ಮತ್ತು ನಾಡಿನ ಜನತೆಯ ನಡುವೆ ಭಾವನಾತ್ಮಕ ಸಂಬಂಧ ಇತ್ತು. ಈ ಆನೆಯ ಸಾವು ನಾಡಿನಾದ್ಯಂತ ಇರುವ ಪ್ರಾಣಿಪ್ರಿಯರಿಗೆ ಮತ್ತು ಸಾರ್ವಜನಿಕರಿಗೆ ನೋವು ತಂದಿದೆ ಎಂದು ಹೇಳಿದರು.

ಹಲವು ಹುಲಿ, ಆನೆ ಕಾರ್ಯಾಚರಣೆಗಳಲ್ಲಿ ಯಶಸ್ವಿಯಾಗಿ ಪಾಲ್ಗೊಂಡಿದ್ದ ಅರ್ಜುನನಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯ ಸಂಸ್ಕಾರ ನೆರವೇರಿಸಲಾಗಿದ್ದು, ಅರ್ಜುನ ಸೇವೆಯನ್ನು ನಾಡಿನ ಜನರು ಸದಾ ಸ್ಮರಿಸುವಂತೆ ಹಾಸನ ಮತ್ತು ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಖಂಡ್ರೆ ತಿಳಿಸಿದರು.

ಆನೆ ಸೇರಿದಂತೆ ವನ್ಯಮೃಗಗಳು ಕಾಡಿನಿಂದ ನಾಡಿಗೆ ಬರುತ್ತಿರುವುದು ಹೆಚ್ಚಾಗುತ್ತಿದ್ದು, ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ವನ್ಯಮೃಗಗಳೂ ಸಾವಿಗೀಡಾಗುತ್ತಿರುವುದು ಆತಂಕದ ವಿಷಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಪಡೆ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ವನ್ಯಜೀವಿ ಸಂಘರ್ಷಕ್ಕೆ ಕ್ರಮ: ಇದಕ್ಕೂ ಮುನ್ನ ಸುವರ್ಣ ವಿಧಾನಸೌಧದಲ್ಲಿ ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರುಗಳಾದ ಕೆ.ಜೆ.ಜಾರ್ಜ್, ಬೋಸರಾಜ್ ಮತ್ತು ಕೆ.ಎನ್. ರಾಜಣ್ಣ ಹಾಗೂ ಮೂರೂ ಜಿಲ್ಲೆಗಳ ಶಾಸಕರ ಉಪಸ್ಥಿತಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ಹೆಚ್ಚಾಗಿರುವ 9 ಜಿಲ್ಲೆಗಳಿಗೆ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವಾರದಲ್ಲಿ ಕನಿಷ್ಠ 2 ದಿನ ನಿಯೋಜಿತ ಜಿಲ್ಲೆಯಲ್ಲೇ ಉಳಿದು ಪರಿಸ್ಥಿತಿಯನ್ನು ನಿಭಾಯಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಪ್ರಸಕ್ತ ಸನ್ನಿವೇಶದಲ್ಲಿ ಆನೆ ನಾಡಿಗೆ ಬಾರದಂತೆ ತಡೆಯಲು ನಮ್ಮ ಬಳಿ ಇರುವ ಉತ್ತಮ ಮಾರ್ಗೋಪಾಯ ಎಂದರೆ ರೈಲ್ವೆ ಬ್ಯಾರಿಕೇಡ್ ಆಗಿದೆ. ಆದರೆ ಇದು ಒಂದೆರಡು ವರ್ಷದಲ್ಲಿ ಆಗುವ ಕೆಲಸವಲ್ಲ. ಬಜೆಟ್​​ನಲ್ಲಿ 100 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದ್ದು, ಆನೆ ಹಾವಳಿ ಹೆಚ್ಚಾಗಿರುವ ಕಡೆ ರೈಲ್ವೆ ಬ್ಯಾರಿಕೇಡ್ ಹಾಕಲು ಕ್ರಮ ವಹಿಸಲಾಗಿದೆ. ಆನೆಗಳ ಸಮಸ್ಯೆ ಇರುವ ಭಾಗದ ಶಾಸಕರೊಂದಿಗೆ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡೋಣ ಎಂದರು.

ಕಳೆದ ಏಪ್ರಿಲ್ ತಿಂಗಳಿನಿಂದೀಚೆಗೆ ರಾಜ್ಯದಲ್ಲಿ ಒಟ್ಟು 43 ಜನರು ಮಾನವ - ವನ್ಯಜೀವಿ ಸಂಘರ್ಷದಲ್ಲಿ ಸಾವನ್ನಪ್ಪಿದ್ದಾರೆ. ಈ ಪೈಕಿ 30 ಮಂದಿ ಆನೆ ದಾಳಿಯಿಂದ ಮೃತಪಟ್ಟಿದ್ದಾರೆ. ಚಾಮರಾಜನಗರದಲ್ಲಿ 10, ಕೊಡಗು ಜಿಲ್ಲೆಯಲ್ಲಿ 7, ರಾಮನಗರ 3, ಬೆಂಗಳೂರು ಮತ್ತು ಮೈಸೂರು, ಹಾಸನದಲ್ಲಿ ತಲಾ 2, ಶಿವಮೊಗ್ಗದಲ್ಲಿ ಒಬ್ಬರು ಆನೆ ದಾಳಿಯಿಂದ ಸಾವಿಗೀಡಾಗಿದ್ದಾರೆ ಎಂದು ವಿವರಿಸಿದರು.

ಉಳಿದಂತೆ ಕಾಡುಹಂದಿ ದಾಳಿಗೆ ಇಬ್ಬರು, ಮೊಸಳೆಗೆ ಒಬ್ಬರು ಬಲಿಯಾಗಿದ್ದಾರೆ. ಕರಡಿ ದಾಳಿಯಿಂದ ಇಬ್ಬರು ಸಾವಿಗೀಡಾಗಿದ್ದರೆ, ಚಿರತೆ ದಾಳಿಯಿಂದ 3 ಸಾವು ಸಂಭವಿಸಿದೆ. ಹುಲಿ ದಾಳಿಯಿಂದ 4 ಸಾವು ಸಂಭವಿಸಿದ್ದರೆ, ಕೋತಿ ಕಚ್ಚಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಮಾಟ, ಮಂತ್ರದ ಸ್ವಾರಸ್ಯಕರ ಚರ್ಚೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.