ETV Bharat / state

ಮೂಡಲಗಿಯಲ್ಲಿ ಹೈಟೆಕ್ ಬಸ್ ಡಿಪೋ ನಿರ್ಮಾಣ: ಶಾಸಕ ಬಾಲಚಂದ್ರ ಜಾರಕಿಹೊಳಿ

ತಾಲೂಕಿನ ಕುಲಗೋಡ ಗ್ರಾಮದಲ್ಲಿ 95 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದ ಅವರು, ಬಸ್ ಘಟಕ ನಿರ್ಮಾಣಕ್ಕೆ ಈಗಾಗಲೇ ನಿವೇಶನ ಗುರುತಿಸಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಸಾರಿಗೆ ನಿಗಮ ಈಗಷ್ಟೇ ಆರ್ಥಿಕವಾಗಿ ಚೇತರಿಕೆ ಕಾಣುತ್ತಿದೆ. ಶೀಘ್ರವೇ ಬಸ್ ಘಟಕ ಸ್ಥಾಪನೆಗೆ ಕ್ರಮ ವಹಿಸಲಾಗುವುದು ಎಂದರು.

author img

By

Published : Nov 29, 2020, 3:39 AM IST

ಬಾಲಚಂದ್ರ ಜಾರಕಿಹೊಳಿ
ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ನೂತನ ತಾಲೂಕಾಗಿರುವ ಮೂಡಲಗಿಯಲ್ಲಿ ಮೂರು ಎಕರೆ ಪ್ರದೇಶದಲ್ಲಿ ಹೈಟೆಕ್ ಬಸ್ ಡಿಪೋ ‌ನಿರ್ಮಿಸಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ತಾಲೂಕಿನ ಕುಲಗೋಡ ಗ್ರಾಮದಲ್ಲಿ 95 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದ ಅವರು, ಬಸ್ ಘಟಕ ನಿರ್ಮಾಣಕ್ಕೆ ಈಗಾಗಲೇ ನಿವೇಶನ ಗುರುತಿಸಲಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಸಾರಿಗೆ ನಿಗಮ ಈಗಷ್ಟೇ ಆರ್ಥಿಕವಾಗಿ ಚೇತರಿಕೆ ಕಾಣುತ್ತಿದೆ. ಶೀಘ್ರವೇ ಬಸ್ ಘಟಕ ಸ್ಥಾಪನೆಗೆ ಕ್ರಮ ವಹಿಸಲಾಗುವುದು ಎಂದರು.

ಮೂಡಲಗಿ ತಾಲೂಕಿನಲ್ಲಿ ಹೋಬಳಿ ರಚನೆ ಪ್ರಕ್ರಿಯೇ ಈಗಾಗಲೇ ನಡೆದಿದೆ. ಕುಲಗೋಡ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ರಚಿಸುವಂತೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ. ಇದರ ಜೊತೆಯಲ್ಲಿ 4-5 ಗ್ರಾಮದ ಗ್ರಾಮಸ್ಥರು ಸಹ ತಮ್ಮ ಗ್ರಾಮಗಳನ್ನು ಹೋಬಳಿ ಕೇಂದ್ರವನ್ನಾಗಿ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ನಾಗರೀಕರಿಗೆ ಬಂದು ಹೋಗಲು ಅನುಕೂಲವಾಗುವಂತೆ ಕೇಂದ್ರ ಸ್ಥಳವನ್ನು ಗುರುತಿಸಿ ಹೊಸ ಹೋಬಳಿ ರಚಿಸಲಾಗುವುದು ಎಂದರು.

ಬಾಲಚಂದ್ರ ಜಾರಕಿಹೊಳಿ
ಕುಲಗೋಡ ಗ್ರಾಮದಲ್ಲಿನ ಬಸ್ ನಿಲ್ದಾಣ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ರಸ್ತೆ ನಿರ್ಮಾಣಕ್ಕೆ 14 ಕೋಟಿ: ಹದಗೆಟ್ಟಿರುವ ಕುಲಗೋಡ-ಯಾದವಾಡ ರಸ್ತೆ ಕಾಮಗಾರಿಗೆ 14ಕೋಟಿ ರೂ.ಗಳ ಮಂಜೂರಾತಿ ದೊರೆತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಕ್ಷೇತ್ರದಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ಸುಧಾರಣೆ ಮಾಡಲಾಗುತ್ತಿದೆ ಇದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಅನುಕೂಲವಾಗಲಿದೆ. ಸಮಗ್ರ ಪ್ರಗತಿಯೇ ನಮ್ಮ ಗುರಿಯಾಗಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.