ETV Bharat / state

ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಗೃಹ ಸಚಿವ ಬೊಮ್ಮಾಯಿ ಶಿಲಾನ್ಯಾಸ - ಪೊಲೀಸ್ ಆಯುಕ್ತರ ಕಚೇರಿಗೆ ಸಚಿವ ಬಸವರಾಜ ಬೊಮ್ಮಾಯಿಯಿಂದ ಶಿಲಾನ್ಯಾಸ

ಕಟ್ಟಡದ ನೀಲನಕ್ಷೆ ವೀಕ್ಷಿಸಿದ ಸಚಿವ ಬಸವರಾಜ ಬೊಮ್ಮಾಯಿ, ಕೆಲ ಸಣ್ಣಪುಟ್ಟ ಮಾರ್ಪಾಡು ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು..

bommayi
ಶಿಲಾನ್ಯಾಸ
author img

By

Published : Dec 1, 2020, 12:05 PM IST

ಬೆಳಗಾವಿ : ಜಿಲ್ಲೆಯಲ್ಲಿ 17 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಪೊಲೀಸ್ ಆಯುಕ್ತರ ಕಚೇರಿ ನಿರ್ಮಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಕಾಲೇಜು ರಸ್ತೆಯಲ್ಲಿ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪೊಲೀಸ್ ಆಯುಕ್ತರ ಕಚೇರಿ ನಿರ್ಮಿಸಿಬೇಕು ಎಂಬುದು ಬಹಳ ದಿನಗಳ ಬೇಡಿಕೆಯಾಗಿತ್ತು.

ನಗರದಲ್ಲಿಯೇ ಎರಡು ಎಕರೆ ಜಾಗ ಲಭ್ಯವಿರುವುದರಿಂದ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ. ಮಹಾನಗರಕ್ಕೆ ತಕ್ಕಂತೆ ಎಲ್ಲಾ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ಕಟ್ಟಡವನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು.

ಕಟ್ಟಡದ ನೀಲನಕ್ಷೆ ವೀಕ್ಷಿಸಿದ ಸಚಿವ ಬಸವರಾಜ ಬೊಮ್ಮಾಯಿ, ಕೆಲ ಸಣ್ಣಪುಟ್ಟ ಮಾರ್ಪಾಡು ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ಶಂಕುಸ್ಥಾಪನೆ ವೇಳೆ ಕೆಎಸ್ಆರ್​ಪಿ ಎಡಿಜಿಪಿ ಅಲೋಕ್ ಕುಮಾರ್, ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಪೊಲೀಸ್ ಆಯುಕ್ತರಾದ ಕೆ.ತ್ಯಾಗರಾಜನ್, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ್ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.