ಚಿಕ್ಕೋಡಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ದೇವಸ್ಥಾನಕ್ಕೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತ ಇಲಾಖೆಯ ಸಚಿವ ಶ್ರೀಮಂತ ಪಾಟೀಲ್, ಕರ್ನಾಟಕ ಉತ್ತರ ಪ್ರಾಂತ ಸಹ ಸಂಘ ಸಂಚಾಲಕರಾದ ಅರವಿಂದ ದೇಶಪಾಂಡೆ ಮೂಲಕ 15 ಲಕ್ಷ ರೂಪಾಯಿಯ ಚೆಕ್ ನೀಡಿದ್ದಾರೆ.
ಓದಿ:'ಅದು ಕೇಂದ್ರಕ್ಕೆ ಬಿಟ್ಟ ವಿಷಯ, ಆ ವಿಚಾರ ಮಾತನಾಡುವಷ್ಟು ದೊಡ್ಡವನಲ್ಲ'
ಚೆಕ್ ನೀಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಬಡವರು, ಶ್ರೀಮಂತರು ಎನ್ನದೇ ಪ್ರತಿಯೊಬ್ಬರು ರಾಮ ಮಂದಿರ ನಿರ್ಮಾಣಕ್ಕಾಗಿ ದಾನ ನೀಡುತ್ತಿದ್ದಾರೆ. ನಾನೂ ಕೂಡ ರಾಮ ಮಂದಿರ ನಿರ್ಮಾಣಕ್ಕೆ ನನ್ನ ಕೈಯಿಂದ ಆದಷ್ಟು ಸಹಾಯ ಮಾಡಿದ್ದೇನೆ ಎಂದರು.