ETV Bharat / state

ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ ನಿರ್ಮಾಣಕ್ಕೆ ಸಚಿವ ಲಕ್ಷ್ಮಣ ಸವದಿ ಸೂಚನೆ.. - ತಾತ್ಕಾಲಿಕ ಶೆಡ್ ನಿರ್ಮಾಣ

ಬೆಳಗಾವಿ ಜಿಲ್ಲೆಯಲ್ಲಿ ನೆರೆಯಿಂದಾಗಿ ಮನೆ ಕಳೆದುಕೊಂಡವರಿಗೆ ಕೂಡಲೇ ತಾತ್ಕಾಲಿಕ ಶೆಡ್​ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು. ಸರ್ಕಾರಿ ಜಮೀನು ಇಲ್ಲದ ಪ್ರದೇಶದಲ್ಲಿ ಬಾಡಿಗೆ ತೆಗೆದುಕೊಂಡು ನಿರ್ಮಿಸಬೇಕು. ಇದರಿಂದ ಶಾಲೆಗಳಲ್ಲಿ ತೆರೆಯಲಾದ ಗಂಜಿ ಕೇಂದ್ರಗಳನ್ನು ತೆರವುಗೊಳಿಸಿ ಶಾಲೆ ಪುನಾರಂಭ ಮಾಡಬೇಕು ಎಂದು ಸಚಿವ ಲಕ್ಷ್ಮಣ ಸವದಿ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಅಧಿಕಾರಿಗಳ ಸಭೆ
author img

By

Published : Aug 21, 2019, 8:37 PM IST

ಬೆಳಗಾವಿ: ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ತಕ್ಷಣ ತಾತ್ಕಾಲಿಕ ಶೆಡ್​ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸಚಿವ ಲಕ್ಷ್ಮಣ ಸವದಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಅಧಿಕಾರಿಗಳ ಸಭೆ..

ಪ್ರವಾಹ ನಿರ್ವಹಣೆ ಮತ್ತು ಸಂತ್ರಸ್ತರಿಗೆ ಪುನರ್ವಸತಿ ಕಲ್ಲಿಸುವ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಪ್ರವಾಹ ಬಾಧಿತ ಗ್ರಾಮದಲ್ಲಿ ಸರ್ಕಾರಿ ಜಮೀನು ಲಭ್ಯವಿರುವ ಕಡೆ ಅಥವಾ ಜಮೀನು ಇಲ್ಲದಿದ್ದರೆ ಬಾಡಿಗೆ ಜಮೀನು ಪಡೆದುಕೊಂಡು ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಬೇಕು. ಸ್ವಂತ ಶೆಡ್ ನಿರ್ಮಾಣಕ್ಕೆ ಮುಂದಾದರೆ ಸರ್ಕಾರದಿಂದ ತಕ್ಷಣ ₹ 50 ಸಾವಿರ ನೀಡಬಹುದು ಎಂದರು.

ತಕ್ಷಣ ಪರಿಹಾರ ನೀಡಲು ಸೂಚನೆ: ಸರ್ಕಾರ ಈಗಾಗಲೇ ಬಿಡುಗಡೆ ಮಾಡಿರುವ ಪರಿಹಾರದ ಹಣವನ್ನು ತಕ್ಷಣವೇ ಸಂತ್ರಸ್ತರಿಗೆ ತಲುಪಿಸಬೇಕು. ಜಿಲ್ಲೆಯಲ್ಲಿ ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆಹಾನಿ ಆಗಿರುವುದರಿಂದ ಕೂಡಲೇ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕೈಗೊಳ್ಳಬೇಕು. ಬಿತ್ತನೆ ಮತ್ತು ಬೆಳೆಯ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಸಮೀಕ್ಷೆ ನಡೆಸಿ. ಇಲ್ಲಿಯೂ ಕೂಡ ಯಾವುದೇ ರೀತಿಯ ತಾರತಮ್ಯಗಳಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಿ ಎಂದರು.

ಸಂತ್ರಸ್ತರ ಪುನರ್ವಸತಿ ಈಗ ನಮ್ಮ ಆದ್ಯತೆ. ಮುಳುಗಡೆಯಾಗಿರುವ ಗ್ರಾಮಗಳಲ್ಲಿ ಜನರು ಸಂಪೂರ್ಣ ಸ್ಥಳಾಂತರಗೊಳ್ಳಲು ಸಮಯಬೇಕು. ಪುನರ್ವಸತಿ ಕಲ್ಪಿಸುವುದೇ ಸರ್ಕಾರಕ್ಕೆ ದೊಡ್ಡ ಸವಾಲಿನ ಕೆಲಸ. ಆದ್ದರಿಂದ ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಅಧಿಕಾರಿಗಳು ಕೆಲಸ ಮಾಡಬೇಕಿದೆ ಎಂದು ಹೇಳಿದರು. ಸಚಿವೆ ಶಶಿಕಲಾ ಜೊಲ್ಲೆ, ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿ ಡಾ. ಎಸ್ ಬಿ ಬೊಮ್ಮನಹಳ್ಳಿ ಇದ್ದರು.

Intro:
ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ ನಿರ್ಮಾಣಕ್ಕೆ ಸಚಿವ ಲಕ್ಷ್ಮಣ ಸವದಿ ಸೂಚನೆ

ಬೆಳಗಾವಿ: ಪ್ರವಾಹ ಮತ್ತು ಮಳೆಯಿಂದ ಸಂಪೂರ್ಣ ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ತಕ್ಷಣ ತಾತ್ಕಾಲಿಕ ಶೆಡ್ ನಿರ್ಮಿಸಿಕೊಡಬೇಕು ಎಂದು ನೂತನ ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಹ ನಿರ್ವಹಣೆ ಮತ್ತು ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರವಾಹ ಬಾಧಿತ ಗ್ರಾಮದಲ್ಲಿ ಸರ್ಕಾರಿ ಜಮೀನು ಲಭ್ಯವಿರುವ ಕಡೆ ಅಥವಾ ಜಮೀನು ಇಲ್ಲದಿದ್ದರೆ ಬಾಡಿಗೆ ಜಮೀನು ಪಡೆದುಕೊಂಡು ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಬೇಕು. ಸ್ವಂತ ಶೆಡ್ ನಿರ್ಮಾಣಕ್ಕೆ ಮುಂದಾದರೆ ಸರ್ಕಾರದಿಂದ ತಕ್ಷಣ 50 ಸಾವಿರ ನೀಡಬಹುದು. ಶಾಲೆಗಳಲ್ಲಿ ಪರಿಹಾರ ಕೇಂದ್ರಗಳನ್ನು ಆರಂಭಿಸಿರುವುದರಿಂದ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ ನಿರ್ಮಿಸಿಕೊಟ್ಟು, ಶಾಲೆಗಳನ್ನು ಪುನರಾರಂಭಿಸಲು ಅನುಕೂಲವಾಗಲಿದೆ ಎಂದರು.

ತಕ್ಷಣ ಪರಿಹಾರ ನೀಡಲು ಸೂಚನೆ:
ಸರ್ಕಾರ ಈಗಾಗಲೇ ಬಿಡುಗಡೆ ಮಾಡಿರುವ ಪರಿಹಾರದ ಹಣವನ್ನು ತಕ್ಷಣವೇ ಸಂತ್ರಸ್ತರಿಗೆ ತಲುಪಿಸಬೇಕು. ಜಿಲ್ಲೆಯಲ್ಲಿ ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆಹಾನಿ ಆಗಿರುವುದರಿಂದ ಕೂಡಲೇ ಬೆಳೆಹಾನಿ ಬಗ್ಗೆ ಜಂಟಿ ಸಮೀಕ್ಷೆ ಕೈಗೊಳ್ಳಬೇಕು. ಬಿತ್ತನೆ ಮತ್ತು ಬೆಳೆಯ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಸಮೀಕ್ಷೆ ನಡೆಸಬೇಕು. ಇಲ್ಲಿಯೂ ಕೂಡ ಯಾವುದೇ ರೀತಿಯ ತಾರತಮ್ಯಗಳಾಗದಂತೆ ಅಧಿಕಾರಿಗಳು ಸೂಕ್ಷ್ಮ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು.
ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೇ ಸಮೀಕ್ಷೆ ನಡೆಸುವ ಮೂಲಕ ಸಂತ್ರಸ್ತರಿಗೆ ಸೂಕ್ತ ನೆರವು ಒದಗಿಸಬೇಕು. ಪ್ರವಾಹ ಬಾಧಿತ ಗ್ರಾಮಗಳಲ್ಲಿ ಮನೆಗಳ ಕುಸಿತದ ಬಗ್ಗೆ ಸಮೀಕ್ಷೆ ಮಾಡುವಾಗ ತಾರತಮ್ಯ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವ ಸವದಿ ಹೇಳಿದರು.
ಸಂತ್ರಸ್ತರ ಪುನರ್ವಸತಿ ಈಗ ನಮ್ಮ ಆದ್ಯತೆಯಾಗಿದೆ. ಮುಳುಗಡೆಯಾಗಿರುವ ಗ್ರಾಮಗಳಲ್ಲಿ ಜನರು ಸಂಪೂರ್ಣ ಸ್ಥಳಾಂತರಗೊಳ್ಳಲು ಇನ್ನೂ ಸಮಯ ಬೇಕಿದೆ. ಪುನರ್ವಸತಿ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ದೊಡ್ಡ ಸವಾಲು. ಆದ್ದರಿಂದ ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಕೆಲಸ ಮಾಡಬೇಕಿದೆ. ಗ್ರಾಮಗಳ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಯಾವುದೇ ರೋಗರುಜಿನಗಳು ಬಾರದಂತೆ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಸಚಿವೆ ಶಶಿಕಲಾ ಜೊಲ್ಲೆ, ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಉಪಸ್ಥಿತರಿದ್ದರು.
--
KN_BGM_03_21_Flood_Relief_minister_Officers_Meeting_7201786Body:

KN_BGM_03_21_Flood_Relief_minister_Officers_Meeting_7201786Conclusion:

KN_BGM_03_21_Flood_Relief_minister_Officers_Meeting_7201786
ETV Bharat Logo

Copyright © 2025 Ushodaya Enterprises Pvt. Ltd., All Rights Reserved.