ಚಿಕ್ಕೋಡಿ: ಕಂಟೈನರ್ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಪೂಜಾರಿಲಾಲ ಯಾದವ (45) ಹಾಗೂ ಮಿಶ್ರಿಲಾಲ ಪ್ರಸಾದ (24) ಮೃತ ದುರ್ದೈವಿಗಳು. ಮೃತರು ಉತ್ತರ ಪ್ರದೇಶದ ಮೂಲದವರಾಗಿದ್ದು, ಅಂಕೋಲದಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ಬೆಳಗಾವಿ ಕಡೆಯಿಂದ ನಿಪ್ಪಾಣಿ ಕಡೆಗೆ ಬರುತ್ತಿರುವಾಗ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ.
ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.