ಬೆಳಗಾವಿ: ಕಾಮಗಾರಿಯ ಬಿಲ್ ವಿಳಂಬವಾಗಿದೆ ಎಂದು ಆರೋಪಿಸಿದ ಗುತ್ತಿಗೆದಾರನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ಇಂದು (ಮಂಗಳವಾರ) ನಡೆದಿದೆ. ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ.
ಬಿಲ್ ವಿಳಂಬವಾಗಿದೆ ಎಂದು ಆರೋಪಿಸಿದ ನಾಗಪ್ಪ ಲೋಕೋಪಯೋಗಿ ಇಲಾಖೆ ಕಚೇರಿಯ ಮುಂದೆ ಕುಟುಂಬಸಹಿತ ಪ್ರತಿಭಟನೆ ನಡೆಸುತ್ತಿದ್ದರು. ''2022ರಲ್ಲಿ ಹಲಗಾ ಗ್ರಾಮದಿಂದ ತಿಗಡಿ ಗ್ರಾಮದವರೆಗೆ ರಸ್ತೆ ಮಾಡಲಾಗಿತ್ತು. ಈ ರಸ್ತೆ ನಿರ್ವಹಣೆಗೆ ಲೋಕೋಪಯೋಗಿ ಇಲಾಖೆ ವರ್ಕ್ ಆರ್ಡರ್ ಕೊಟ್ಟಿತ್ತು. ಆದರೆ, ಕಾಮಗಾರಿ ಮುಗಿದಿದ್ದರೂ ಬಿಲ್ ವಿಳಂಬ ಮಾಡಲಾಗುತ್ತಿದೆ'' ಎಂದು ನಾಗಪ್ಪ ಪ್ರತಿಭಟನೆ ವೇಳೆ ಆರೋಪ ಮಾಡಿದ್ದರು. ಬಳಿಕ ಅಲ್ಲಿದ್ದವರು ತಡೆದರೂ ನಾಗಪ್ಪ ಆತ್ಮಹತ್ಯೆಗೆ ಯತ್ನಿಸಿದ್ದರು.
ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಇದನ್ನೂ ಓದಿ: ಅಕ್ರಮ ಜಾಹೀರಾತು ತಡೆಯುವಲ್ಲಿ ವಿಫಲವಾದ ಅಧಿಕಾರಿಗಳ ವಿರುದ್ಧ ಕ್ರಮ: ಹೈಕೋರ್ಟ್‌ಗೆ ಬಿಬಿಎಂಪಿ ಮಾಹಿತಿ