ಬೆಳಗಾವಿ: ಅಡುಗೆ ಅನಿಲ ಸೋರಿಕೆಯಾಗಿ ಇಡೀ ಮನೆ ಹೊತ್ತಿ ಉರಿದ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ನಡೆದಿದೆ.
ಎಂ.ಕೆ.ಹುಬ್ಬಳ್ಳಿಯ ಜೋಳದ ಓಣಿಯ ಅಡವಯ್ಯ ಎಂಬುವವರ ಮನೆ ಇದಾಗಿದೆ. ಅಡುಗೆ ಮನೆಯ ಪಕ್ಕವೇ ದೇವರ ಕೋಣೆಯಿದೆ. ದೇವರ ಕೋಣೆಯಲ್ಲಿ ಹಚ್ಚಿದ್ದ ದೀಪಕ್ಕೆ ಸಿಲಿಂಡರ್ ಪೈಪ್ ತಾಗಿ ಅಡುಗೆ ಅನಿಲ್ ಸೋರಿಕೆಯಾಗಿದ್ದು, ಮನೆಗೆ ಬೆಂಕಿ ಹೊತ್ತಿದೆ. ಇದರಿಂದ ಆತಂಕಗೊಂಡ ಸ್ಥಳೀಯರು, ಮನೆಯ ಚಾವಣಿಯ ಹಂಚು ತೆಗೆದು ನೀರು ಹಾಕಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮನೆಯವರೆಲ್ಲ ಹೊಲಕ್ಕೆ ಹೋದಾಗ ಈ ದುರ್ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಸ್ಥಳಕ್ಕೆ ಎಂ.ಕೆ.ಹುಬ್ಬಳ್ಳಿ ಉಪಠಾಣೆ ಪೊಲೀಸರು ಭೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ.