ಬೆಳಗಾವಿ: ಮಹಾಮಾರಿ ಕೊರೊನಾ ಹರಡದಂತೆ ಮುನ್ನಚರಿಕೆ ಕ್ರಮವಾಗಿ ಬೈಲಹೊಂಗಲ ತಾಲೂಕಿನ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಮತ್ತು ಮಾಜಿ ಸೈನಿಕರು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿದ್ದಾರೆ.
ಜಿಲ್ಲೆಯ ಬೈಲಹೊಂಗಲ ತಾಲೂಕಿನ ವ್ಯಾಪ್ತಿಗೆ ಒಳಪಡುವ ನೇಸರಗಿ ಪೊಲೀಸರು, ಮಾಜಿ ಸೈನಿಕರು, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ್ ಸಿಬ್ಬಂದಿ ವಣ್ಣೂರು, ಮೇಕಲಮರಡಿ ಸೇರಿದಂತೆ ಇತರ ಹಳ್ಳಿಗಳಲ್ಲಿ ಪಥಸಂಚಲನ ನಡೆಸಿ ಕೊರೊನಾ ಜಾಗೃತಿ ಮೂಡಿಸಲಾಯಿತು.
ಕೊರೊನಾ ವೈರಸ್ ಕುರಿತು ಜನರಲ್ಲಿರುವ ಭಯವನ್ನು ದೂರಮಾಡಿ ಧೈರ್ಯ ತುಂಬುವ ಕೆಲಸ ಮಾಡಿದರು.