ETV Bharat / state

ಬೆಳಗಾವಿ: ಸರ್ಕಾರಿ ಅಧಿಕಾರಿಗೆ ಕೋವಿಡ್ ಸೋಂಕು - ಕೋವಿಡ್ ರೂಪಾಂತರಿ ತಳಿ

ಬೆಳಗಾವಿಯಲ್ಲಿ ಓರ್ವ ಸರ್ಕಾರಿ ಅಧಿಕಾರಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಬೆಳಗಾವಿ
ಬೆಳಗಾವಿ
author img

By ETV Bharat Karnataka Team

Published : Dec 21, 2023, 7:27 PM IST

ಶಾಸಕ ಆಸೀಫ್ ಸೇಠ್

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಮೊದಲ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಸರ್ಕಾರಿ ಅಧಿಕಾರಿಗೆ ಸೋಂಕು ತಗುಲಿದೆ. ಬಿಮ್ಸ್‌‌ ಆಸ್ಪತ್ರೆಯಲ್ಲಿ ರ‍್ಯಾಪಿಡ್ ಟೆಸ್ಟ್ ಮಾಡಿಸಿಕೊಂಡ ವೇಳೆ ಸೋಂಕು ದೃಢಪಟ್ಟಿದೆ.

ಕಳೆದೊಂದು ವಾರದಿಂದ ಕೆಮ್ಮು, ನೆಗಡಿ ಸಮಸ್ಯೆಯಿಂದ ಅಧಿಕಾರಿ ಬಳಲುತ್ತಿದ್ದರು. ವೈದ್ಯರ ಸಲಹೆಯಂತೆ ಹೋಮ್ ಐಸೋಲೇಶನ್ ಆಗಿದ್ದಾರೆ. ರೂಪಾಂತರಿ ಹಾವಳಿ ಶುರುವಾಗಿರುವಾಗಲೇ ಒಂದೂವರೆ ವರ್ಷದ ಬಳಿಕ ಜಿಲ್ಲೆಯಲ್ಲಿ ಮೊದಲ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.

ಕೋವಿಡ್ ಮುನ್ನೆಚ್ಚರಿಕೆ ಸಭೆ: ಕಳೆದ ಬಾರಿ ಸಂಭವಿಸಿದ ಅನಾಹುತಗಳು‌ ಮರುಕಳಿಸದಂತೆ ಜೆಎನ್.1 ರೂಪಾಂತರಿ ತಳಿ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಡಿಸಿ ನಿತೇಶ್ ಪಾಟೀಲ್ ತಿಳಿಸಿದರು. ಬೆಳಗಾವಿ ಬಿಮ್ಸ್ ಸಭಾಂಗಣದಲ್ಲಿ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ದಿಢೀರ್ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಮ್ಸ್‌ನಲ್ಲಿ ಈಗಾಗಲೇ 908 ಕೋವಿಡ್ ಆಕ್ಸಿಜನ್ ಬೆಡ್​ಗಳು ಲಭ್ಯ ಇವೆ. 78 ವೆಂಟಿಲೇಟರ್ ಇದ್ದು, ಎಲ್ಲವೂ ಕಾರ್ಯನಿರ್ವಹಿಸುತ್ತಿವೆ. ಈ ಹಿಂದೆ ಕೋವಿಡ್ ನಿರ್ವಹಿಸಿರುವ ಅನುಭವ ಸಿಬ್ಬಂದಿಗೆ ಇರುವ ಹಿನ್ನೆಲೆಯಲ್ಲಿ ಯಾವುದೇ ತೊಂದರೆ ಆಗುವುದಿಲ್ಲ ಎಂದರು.

ಮಹಾರಾಷ್ಟ್ರ ಹಾಗೂ ಗೋವಾ ಗಡಿಭಾಗದಲ್ಲಿ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ಮಾಡುವ ನಿಟ್ಟಿನಲ್ಲಿ ಸರ್ಕಾರದ ನಿಯಮವನ್ನು ಅಚ್ಚುಕಟ್ಟಾಗಿ ಪಾಲನೆ ಮಾಡಲಾಗುತ್ತದೆ. ಕೋವಿಡ್ ಕಿಟ್‌ಗಳನ್ನು ನೀಡುವಂತೆ ಈಗಾಗಲೇ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ. ಶೀಘ್ರವೇ ಅವು‌ ಬರಲಿವೆ ಎಂದು ಹೇಳಿದರು.

ಶಾಸಕ ಆಸೀಫ್ ಸೇಠ್ ಮಾತನಾಡಿ, ಈ ಹಿಂದೆ ಜಿಲ್ಲೆಯಲ್ಲಿ ಕೋವಿಡ್​ನಿಂದ‌ ಸಂಭವಿಸಿದ ಸಾವು, ನೋವುಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಕೋವಿಡ್ ಬಗ್ಗೆ ಮುನ್ನೆಚ್ಚರಿಕೆಯಾಗಿ ಪೂರ್ವಭಾವಿ ಸಭೆ ಮಾಡಿದ್ದೇವೆ. ಜಿಲ್ಲೆಯಲ್ಲಿ ಜನ ಭಯಪಡುವ ಅಗತ್ಯ ಇಲ್ಲ. ಗಡಿಭಾಗದಲ್ಲಿ ಹೆಚ್ಚಿನ ನಿಗಾವಹಿಸಲು ಸೂಚಿಸಲಾಗಿದೆ. ಅಲ್ಲದೆ, ಕೋವಿಡ್ ತಪಾಸಣೆ ಹೆಚ್ಚು ಮಾಡುವಂತೆಯೂ ತೀರ್ಮಾನಿಸಲಾಗಿದೆ.

ಕೋವಿಡ್ ಸೋಂಕಿನ ಮಾದರಿ ಕೇರಳದಲ್ಲಿ ಹೆಚ್ಚಾಗಿದೆ. ನಗರ ಸೇರಿದಂತೆ ಜಿಲ್ಲೆಯಲ್ಲಿಯೂ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಇದೆ ಎಂದ ಅವರು, ಬಿಮ್ಸ್​ನಲ್ಲಿ ವೈದ್ಯರ ಕೊರತೆ ಇರುವುದನ್ನು ಈಗಾಗಲೇ ಸರ್ಕಾರದ ಗಮನಕ್ಕೆ ತರಲಾಗಿದೆ. ಆದಷ್ಟು ಬೇಗ ಸಿಬ್ಬಂದಿ ನೇಮಕಾತಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಕೋಣಿ ಹೇಳಿಕೆ

ಸಭೆಗೂ ಮೊದಲು ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಕೋಣಿ, ಜೆಎನ್.1 ರೂಪಾಂತರಿ ತಳಿ ಅಷ್ಟೊಂದು ತೀವ್ರತರವಾಗಿಲ್ಲ. ಈಗಾಗಲೇ 40 ದೇಶಗಳಲ್ಲಿ ಕಂಡುಬಂದಿದೆ. ಆದರೆ ಇದರಲ್ಲಿ ಶೇ.93-95ರಷ್ಟು ಜನ ಮನೆಯಲ್ಲೆ ಗುಣಮುಖರಾಗಿದ್ದಾರೆ. ನಮ್ಮಲ್ಲಿ ಯಾವುದೇ ಕೇಸ್ ಪತ್ತೆಯಾಗಿಲ್ಲ. ಆದರೂ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಯಾರೂ ಆತ‌ಂಕಕ್ಕೆ ಒಳಗಾಗಬಾರದು: ಜಿಲ್ಲೆಯ 9 ಸಾರ್ವಜನಿಕ ಆಸ್ಪತ್ರೆಗಳಲ್ಲಿ ಐಸಿಯು ಬೆಡ್, ಆಕ್ಸಿಜನ್, ಔಷಧಿ ಸೇರಿ ಎಲ್ಲ ರೀತಿಯ ತಯಾರಿ ನಡೆದಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ, ಪ್ರತಿದಿನ 5 ಸಾವಿರ ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದು, ಎಂಥದ್ದೇ ಪರಿಸ್ಥಿತಿ ಉದ್ಭವಿಸಿದರೂ ಅದನ್ನು ನಿಯಂತ್ರಿಸಲು ಸಿದ್ಧರಿದ್ದೇವೆ. ಹಾಗಾಗಿ, ಯಾರೂ ಆತ‌ಂಕಕ್ಕೆ ಒಳಗಾಗಬಾರದು ಎಂದು ಕೋರಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಕೋಣಿ,‌ ಬಿಮ್ಸ್ ನಿರ್ದೇಶಕ ಡಾ.ಅಶೋಕ ಶೆಟ್ಟಿ, ಮಹಾನಗರ ಪಾಲಿಕೆ‌ ಆಯುಕ್ತ ಅಶೋಕ‌‌ ದುಡಗುಂಟಿ ಸೇರಿ ಮತ್ತಿತರರು ಇದ್ದರು.

ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಪುಟ ಉಪ ಸಮಿತಿ ರಚನೆ: ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.