ಬೆಳಗಾವಿ: ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲೇ ಮತ್ತೊಂದು ಸೋಂಕು ಪತ್ತೆಯಾಗಿದೆ.
ಪಿ- 128 ಸೋಂಕಿತ ವ್ಯಕ್ತಿಯೊಂದಿಗೆ ದ್ವಿತೀಯ ಸಂಪರ್ಕಕ್ಕೆ ಬಂದಿದ್ದ 23 ವರ್ಷದ ಯುವಕನಿಗೆ ಸೋಂಕು ತಗುಲಿದೆ. ಸದ್ಯ ಹಿರೇಬಾಗೇವಾಡಿ ಗ್ರಾಮದಲ್ಲಿ ಸೋಂಕಿತರ ಸಂಖ್ಯೆ 37 ಕ್ಕೆ ಏರಿಕೆಯಾಗಿದೆ.
ದೆಹಲಿಯ ತಬ್ಲಿಘಿ ಧರ್ಮಸಭೆಯಲ್ಲಿ ಪಾಲ್ಗೊಂಡು ಬಂದಿದ್ದ 128ನೇ ಸೋಂಕಿತ ವ್ಯಕ್ತಿಯಿಂದ ಒಟ್ಟು ಹಿರೇಬಾಗೇವಾಡಿ ಗ್ರಾಮದಲ್ಲಿ 36 ಜನರಿಗೆ ಸೋಂಕು ತಗುಲಿದೆ. ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಬೆಳಗಾವಿ ತಾಲೂಕಿನ ಜನರು ಬೆಚ್ಚಿಬಿದ್ದಿದ್ದಾರೆ.