ಬೆಳಗಾವಿ: ಬೈಲಹೊಂಗಲ ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ್‌ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ವೇಳೆ ಮನವಿ ಮಾಡಿಕೊಂಡಿರುವ ಮಾಜಿ ಶಾಸಕರು, ಕೋವಿಡ್ ದೃಢವಾದರೂ ನಾನು ಆರೋಗ್ಯವಾಗಿದ್ದೇನೆ. ನನ್ನ ಜೊತೆ ಪ್ರಾಥಮಿಕ, ದ್ವಿತೀಯ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಹೋಂ ಕ್ವಾರಂಟೈನ್ ಆಗಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಕೊರೊನಾ ವಿರುದ್ಧ ಹೋರಾಟ ಮಾಡೋಣ ಎಂದಿದ್ದಾರೆ.